ರಾಮ ಮಂದಿರ ನಿರ್ಮಾಣಕ್ಕೆ ಶಿವಸೇನಾ, ಬಿಜೆಪಿ ಒತ್ತಡ , ಜನರನ್ನು ಮರಳು ಮಾಡಲು ಸಾಧ್ಯವಿಲ್ಲ - ಖರ್ಗೆ
ರಾಮ ಮಂದಿರ ನಿರ್ಮಾಣಕ್ಕೆ ಶಿವಸೇನಾ ಹಾಗೂ ಬಿಜೆಪಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ. ಆದರೆ, ಜನರನ್ನು ಮರಳು ಮಾಡಲು ಸಾಧ್ಯವಿಲ್ಲ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನವದೆಹಲಿ: ರಾಮ ಮಂದಿರ ನಿರ್ಮಾಣಕ್ಕೆ ಶಿವಸೇನಾ ಹಾಗೂ ಬಿಜೆಪಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುತ್ತಿವೆ. ಆದರೆ, ಜನರನ್ನು ಮರಳು ಮಾಡಲು ಸಾಧ್ಯವಿಲ್ಲ ಎಂದು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಅಯೋಧ್ಯೆಗೆ ಭೇಟಿ ನೀಡದಂತೆ ನಾಲ್ಕೈದು ವರ್ಷಗಳಿಂದ ಯಾರು ತಡೆದಿದ್ದರೂ ಎಂದು ಪ್ರಶ್ನಿಸಿರುವ ಮಲ್ಲಿಕಾರ್ಜುನ ಖರ್ಗೆ, ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಯೋಧ್ಯೆಗೆ ಭೇಟಿ ನೀಡಿ ರಾಜಕೀಯ ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ಮುಂದಿನ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲರೂ ಈಗ ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ. ಶಿವಸೇನಾ ಹಾಗೂ ಬಿಜೆಪಿ ಎರಡೂ ಪಕ್ಷಗಳು ಒಂದೇ ಆಗಿದ್ದು, ಜನರನ್ನು ಒಲೈಸಿಕೊಳ್ಳಲು ರಾಮ ಮಂದಿರ ನಿರ್ಮಾಣದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಆದರೆ, ಜನರನ್ನು ಮರಳು ಮಾಡಲು ಸಾಧ್ಯವಿಲ್ಲ ಎಂದು ಖರ್ಗೆ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


