26/11 ಮುಂಬೈ ದಾಳಿಗೆ 10 ವರ್ಷ: ಸರ್ಜೀಕಲ್ ಸ್ಟೈಕ್'ಗೆ ಸಾಕ್ಷ್ಯ ಕೇಳಿದ್ದ ಕಾಂಗ್ರೆಸ್ ವಿರುದ್ದ ಪ್ರಧಾನಿ ಮೋದಿ ವಾಗ್ದಾಳಿ
ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಗಡಿಯಲ್ಲಿ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾಗ ಇಡೀ ದೇಶ ಹೆಮ್ಮೆಪಟ್ಟಿತ್ತು. ಆದರೆ, ಕಾಂಗ್ರೆಸ್ ಪಕ್ಷ ಮಾತ್ರ ಸೀಮಿತ ದಾಳಿಗೆ ದಾಖಲೆಗಳನ್ನು ಕೇಳಿತ್ತು ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ...

Published On :
ಭಿಲ್ವಾರಾ (ರಾಜಸ್ಥಾನ): ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಗಡಿಯಲ್ಲಿ ಸೇನೆ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದಾಗ ಇಡೀ ದೇಶ ಹೆಮ್ಮೆಪಟ್ಟಿತ್ತು. ಆದರೆ, ಕಾಂಗ್ರೆಸ್ ಪಕ್ಷ ಮಾತ್ರ ಸೀಮಿತ ದಾಳಿಗೆ ದಾಖಲೆಗಳನ್ನು ಕೇಳಿತ್ತು ಎಂದು ಕಾಂಗ್ರೆಸ್ ವಿರುದ್ಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ.
ರಾಜಸ್ಥಾನದ ಭಿಲ್ವಾರಾದಲ್ಲಿ ಆಯೋಜಿಸಲಾಗಿರುವ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾಂಗ್ರೆಸ್ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.
ಗಡಿಯಲ್ಲಿ ಹೋರಾಟಕ್ಕಿಳಿದಾಗ ಯೋಧರು ಕ್ಯಾಮೆರಾಗಳನ್ನು ತೆಗೆದುಕೊಂಡು ಹೋಗಬೇಕೆ?. 26/11 ದಾಳಿ ಹಾಗೂ ದಾಳಿಕೋರರನ್ನು ಕಾಂಗ್ರೆಸ್ ಎಂದಿಗೂ ಮರೆಯುವುದಿಲ್ಲ. ನ್ಯಾಯ ಖಂಡಿತವಾಗಿಯೂ ದೊರೆಯಲಿದೆ. ಈ ಭರವಸೆಯನ್ನು ಇಡೀ ದೇಶಕ್ಕೆ ನಾನು ನೀಡುತ್ತಿದ್ದೇನೆಂದು ಹೇಳಿದ್ದಾರೆ.
ನಮ್ಮ ಸರ್ಕಾರ ಉಗ್ರರು ಹಾಗೂ ನಕ್ಸಲರಿಗೆ ನಮ್ಮದೇ ಆದ ಭಾಷೆಯಲ್ಲಿಯೇ ದಿಟ್ಟ ಉತ್ತರವನ್ನು ನೀಡುತ್ತಿದೆ. ನಕ್ಸಲರನ್ನು ಕಾಂಗ್ರೆಸ್ ಕ್ರಾಂತಿಕಾರಿಗಳೆಂದು ಕರೆಯುತ್ತದೆ. ನಂತರ ಅವರಿಗೆ ಪ್ರಮಾಣಪತ್ರವನ್ನೂ ನೀಡುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಬಳಿಕ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಕಿಡಿಕಾರಿದ ಅವರು, ಇಂದು 26/11... 10 ವರ್ಷಗಳ ಹಿಂದೆ ರಾಜಧಾನಿ ದೆಹಲಿಯನ್ನು 'ಮೇಡಂ' (ಸೋನಿಯಾ ಗಾಂಧಿ) ಆಳುತ್ತಿದ್ದರು. ಇಡೀ ದೇಶದ ಆಡಳಿತವನ್ನು ರಿಮೋಟ್ ಕಂಟ್ರೋಲ್ ಜೊತೆಗೆ ಆಳುತ್ತಿದ್ದರು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


