26/11 ದಾಳಿಕೋರರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲ: ಪಾಕ್ ಗೆ ಭಾರತ ತರಾಟೆ
ಮುಂಬೈ 26/11 ದಾಳಿ ನಡೆದು ಇಂದಿಗೆ 10 ವರ್ಷ. ಆದರೆ ಮುಂಬೈ ನಲ್ಲಿ ದಾಳಿ ನಡೆಸಿದ್ದ ತನ್ನ ನೆಲದ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಕ್ಕೆ ಪಾಕಿಸ್ತಾನ ವಿಫಲವಾಗಿದೆ.

Published On :
ನವದೆಹಲಿ: ಮುಂಬೈ 26/11 ದಾಳಿ ನಡೆದು ಇಂದಿಗೆ 10 ವರ್ಷ. ಆದರೆ ಮುಂಬೈ ನಲ್ಲಿ ದಾಳಿ ನಡೆಸಿದ್ದ ತನ್ನ ನೆಲದ ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಕ್ಕೆ ಪಾಕಿಸ್ತಾನ ವಿಫಲವಾಗಿದೆ. ದಾಳಿ ನಡೆದು ಒಂದು ದಶಕವೇ ಕಳೆದರೂ ಕ್ರಮ ಕೈಗೊಳ್ಳುವುದರಲ್ಲಿ ವಿಫಲವಾಗಿರುವ ಪಾಕಿಸ್ತಾನದ ವಿರುದ್ಧ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.
ದಾಳಿ ನಡೆದು 10 ವರ್ಷಗಳೇ ಕಳೆದರೂ ದಾಳಿಗೆ ಕಾರಣವಾದ ಭಯೋತ್ಪಾದಕರ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ದುಃಖಕರ ವಿಚಾರ. ದಾಳಿಯಲ್ಲಿ ಜೀವ ಕಳೆದುಕೊಂಡ 15 ದೇಶಗಳ 166 ಸಂತ್ರಸ್ತರ ಕುಟುಂಬ ಸದಸ್ಯರುಗಳು ನ್ಯಾಯಕ್ಕಾಗಿ ಇಂದಿಗೂ ಎದುರು ನೋಡುತ್ತಿದ್ದಾರೆ. ಆದರೆ ದಾಳಿ ಮಾಡಿದವರ ವಿರುದ್ಧ ಪಾಕಿಸ್ತಾನ ಕೈಗೊಳ್ಳುವುದಕ್ಕೆ ವಿಫಲವಾಗಿದ್ದು, ದಾಳಿ ನಡೆಸಲು ಸಂಚು ರೂಪಿಸಿದವರು ಇಂದಿಗೂ ಪಾಕಿಸ್ತಾನದಲ್ಲಿ ನಿರ್ಭಯದಿಂದ ತಿರುಗುತ್ತಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿದೆ.
26/11 ದಾಳಿ ಪಾಕಿಸ್ತಾನದ ನೆಲದಿಂದಲೇ ಸಂಚು ರೂಪಿಸಿ ನಡೆಸಲಾಗಿದ್ದ ದಾಳಿಯಾಗಿದೆ. ವರ್ಷದ ಪ್ರಾರಂಭದಲ್ಲಿ 26/11 ರ ದಾಳಿಕೋರರು ಪಾಕಿಸ್ತಾನಕ್ಕೇ ಸೇರಿದವರೆಂದು ಒಪ್ಪಿಕೊಂಡಿದ್ದಾರೆ. ಈ ಪ್ರಕರಣದಲ್ಲಿ ಪಾಕಿಸ್ತಾನ ದ್ವಂದ್ವ ನೀತಿಯನ್ನು ಕೈಬಿಡಬೇಕೆಂದು ಮತ್ತೊಮ್ಮೆ ಕರೆ ನೀಡುತ್ತೇವೆ ಎಂದು ಭಾರತದ ವಿದೇಶಾಂಗ ಇಲಾಖೆ ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


