ದೇಶ

ರಾಜ್ಯಪಾಲರ ನಿರ್ಣಯದ ವಿರುದ್ಧ ಕೋರ್ಟ್ ಗೆ ಹೋಗುವುದಿಲ್ಲ: ಮೆಹೆಬೂಬಾ ಮುಫ್ತಿ

ಜಮ್ಮು-ಕಾಶ್ಮೀರದ ವಿಧಾನಸಭೆಯನ್ನು ವಿಸರ್ಜನೆ ಮಾಡುವುದಕ್ಕೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಕೋರ್ಟ್ ಗೆ ಹೋಗುವುದಿಲ್ಲ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ....

ರಾಜ್ಯಪಾಲರ ನಿರ್ಣಯದ ವಿರುದ್ಧ ಕೋರ್ಟ್ ಗೆ ಹೋಗುವುದಿಲ್ಲ: ಮೆಹೆಬೂಬಾ ಮುಫ್ತಿ
Mehbooba rules out going to court against Guv's decision
Published On :
ಶ್ರೀನಗರ: ಜಮ್ಮು-ಕಾಶ್ಮೀರದ ವಿಧಾನಸಭೆಯನ್ನು ವಿಸರ್ಜನೆ ಮಾಡುವುದಕ್ಕೆ ರಾಜ್ಯಪಾಲರು ನೀಡಿರುವ ಆದೇಶವನ್ನು ಪ್ರಶ್ನಿಸಿ ಕೋರ್ಟ್ ಗೆ ಹೋಗುವುದಿಲ್ಲ ಎಂದು ಜಮ್ಮು-ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಸ್ಪಷ್ಟಪಡಿಸಿದ್ದಾರೆ. 
ನ.21 ರಂದು ಪಿಡಿಪಿ-ಕಾಂಗ್ರೆಸ್, ಎನ್ ಸಿ ಸರ್ಕಾರ ರಚನೆ ಮಾಡುವ ಪ್ರಯತ್ನದಲ್ಲಿದ್ದಾಗಲೇ ರಾಜ್ಯಪಾಲರು ಜಮ್ಮು-ಕಾಶ್ಮೀರ ವಿಧಾನಸಭೆಯನ್ನು ಏಕಾ ಏಕಿ ವಿಸರ್ಜನೆ ಮಾಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮೆಹಬೂಬಾ ಮುಫ್ತಿ, ರಾಜ್ಯಪಾಲರ ನಿರ್ಧಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವಂತೆ ಹಲವಾರು ಹಿತೈಶಿಗಳು ಸಲಹೆ ನೀಡಿದ್ದರು. ಆದರೆ ನಾನು ಕೋರ್ಟ್ ಗೆ ಹೋಗುವುದಿಲ್ಲ ಎಲ್ಲಕ್ಕಿಂತ ಸರ್ವೋಚ್ಛವಾದ ಜನತಾ ನ್ಯಾಯಾಲಯದೆದುರು ಹೋಗುತ್ತೇನೆ ಎಂದು ಮೆಹಬೂಬಾ ಮುಫ್ತಿ ಹೇಳಿದ್ದಾರೆ. 
2-3 ಪಕ್ಷಗಳು ಸೇರಿ ರಚನೆ ಮಾಡುವ ಸಮ್ಮಿಶ್ರ ಸರ್ಕಾರದಿಂದ ಒಳಿತಾಗುವುದಿಲ್ಲ. ಕುದುರೆ ವ್ಯಾಪಾರ ನಡೆಯುತ್ತದೆ. ಆದ್ದರಿಂದ ವಿಧಾನಸಭೆಯನ್ನು ವಿಸರ್ಜಿಸಿರುವುದು ಸರಿಯಾಗಿದೆ ಎಂದು ರಾಜ್ಯಪಾಲರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.