ನಟ ಅಂಬರೀಷ್ ವಿಧಿವಶ: ಪ್ರಧಾನಿ ಮೋದಿ ಸಂತಾಪ
ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಹೆಚ್. ಅಂಬರೀಷ್ ನಿಧನ ಹೊಂದಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ತೀವ್ರ ಸಂತಾಪ ಸೂಚಿಸಿದ್ದಾರೆ...

Published On :
ನವದೆಹಲಿ: ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಹೆಚ್. ಅಂಬರೀಷ್ ನಿಧನ ಹೊಂದಿರುವ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ತೀವ್ರ ಸಂತಾಪ ಸೂಚಿಸಿದ್ದಾರೆ.
ಅಂಬರೀಷ್ ಅವರಾ ರಾಜ್ಯ ಹಾಗೂ ಕೇಂದ್ರದ ಮಟ್ಟದಲ್ಲಿ ಕರ್ನಾಟಕದ ದನಿಯಾಗಿದ್ದರು. ಅವರ ಅಗಲಿಕೆ ಬಹಳಷ್ಟು ನೋವು ತಂದಿದೆ. ಅಂಬರೀಷ್ ಅವರ ಕುಟುಂಬದವರಿಗೆ ಈ ನೋವು ಭರಿಸುವ ಶಕ್ತಿ ದೇವರು ನೀಡಲಿ ಎಂದು ಹೇಳಿದ್ದಾರೆ.
ಎದೆನೋವು ಹಾಗೂ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಅಂಬರೀಷ್ ಅವರು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ, ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅಂಬರೀಷ್ ಅವರ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಕುಮಾರ್ ಅವರ ಸಮಾಧಿ ಪಕ್ಕದಲ್ಲಿಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೆರವೇರಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


