ಪಾಕಿಸ್ತಾನ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಪಂಜಾಬ್ ಸಿಎಂ
ಪಾಕಿಸ್ತಾನ ಕದನವಿರಾಮ ಉಲ್ಲಂಘನೆ ಮಾಡುತ್ತಿರುವುದರ ಕುರಿತು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಪಾಕ್ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ

Published On :
ಗುರ್ದಾಸ್ ಪುರ: ಪಾಕಿಸ್ತಾನ ಕದನವಿರಾಮ ಉಲ್ಲಂಘನೆ ಮಾಡುತ್ತಿರುವುದರ ಕುರಿತು ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಪಾಕ್ ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ್ದಾರೆ.
ಕರ್ತಾರ್ ಪುರ ಕಾರಿಡಾರ್ ಗೆ ಶಿಲನ್ಯಾಸ ನೆರವೇರಿಸಿದ ನಂತರ ಪಾಕ್ ನ ಸೇನಾ ಮುಖ್ಯಸ್ಥರನ್ನು ಪ್ರಶ್ನಿಸಿರುವ ಅಮರಿಂದರ್ ಸಿಂಗ್ "ನಿಮಗೆ ನಾನು ಎಚ್ಚರಿಕೆ ನೀಡುತ್ತಿದ್ದೆನೆ, ನಾವೂ ಕೂಡಾ ಪಂಜಾಬಿಗಳೇ, ನೀವು ಭಾರತವನ್ನು ಪ್ರವೇಶಿಸುವುದಕ್ಕಾಗಲೀ ಇಲ್ಲಿನ ವಾತಾವರಣ ಹದಗೆಡಿಸುವುದಕ್ಕಾಗಿ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಕದನ ವಿರಾಮ ಉಲ್ಲಂಘನೆ ಹೇಡಿಗಳ ಲಕ್ಷಣ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ಪಾಕ್ ಸೇನಾ ಮುಖ್ಯಸ್ಥರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಕದನ ವಿರಾಮ ಉಲ್ಲಂಘನೆ ಮಾಡಿ ಎದುರಾಳಿ ಸೈನಿಕರನ್ನು ಹತ್ಯೆ ಮಾಡಲು ಯಾವ ಸೇನೆ ಹೇಳಿಕೊಡುತ್ತದೆ? ಪಠಾಣ್ ಕೋಟ್ ಹಾಗೂ ಅಮೃತ್ ಸರಕ್ಕೆ ದಾಳಿ ನಡೆಸಲು ಜನರನ್ನು ಕಳಿಸುವುದನ್ನು ಯಾವ ಸೇನೆ ಹೇಳಿಕೊಡುತ್ತದೆ ಎಂದು ಪ್ರಶ್ನಿಸಿದ್ದಾರೆ.
ಕರ್ತಾರ್ ಪುರ ಕಾರಿಡಾರ್ ಗೆ ಪಾಕಿಸ್ತಾನದಲ್ಲಿ ನ.28 ರಂದು ಶಿಲನ್ಯಾಸ ನೆರವೇರಿಸಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಪಾಕ್ ಸರ್ಕಾರ ಪಂಜಾಬ್ ಸಿಎಂ ಅಮರಿಂದರ್ ಸಿಂಗ್ ಅವರನ್ನೂ ಆಹ್ವಾನಿಸಿತ್ತು. ಆದರೆ ಪಾಕಿಸ್ತಾನದಿಂದ ನಿರಂತರವಾಗಿ ಕದನ ವಿರಾಮ ಉಲ್ಲಂಘನೆಯ ಕಾರಣ ನೀಡಿದ್ದ ಅಮರಿಂದರ್ ಸಿಂಗ್ ಪಾಕ್ ಆಹ್ವಾನವನ್ನು ನಿರಾಕರಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
jawansಯೋಧರುpakistan Army chiefಪಾಕಿಸ್ತಾನ ಸೇನಾ ಮುಖ್ಯಸ್ಥCM Amarinder SinghQamar Bajwaಸಿಎಂ ಅಮರಿಂದರ್ ಸಿಂಗ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


