ಕೆಲಸ ನೀಡುವುದಾಗಿ ಮಹಿಳೆ ಅಪಹರಣ, 2 ಲಕ್ಷಕ್ಕೆ ಮಾರಾಟ, ನಿರಂತರ 24 ದಿನ ಅತ್ಯಾಚಾರ!
ಕೆಲಸ ನೀಡುವುದಾಗಿ ಮಹಿಳೆ ಅಪಹರಣ ಮಾಡಿ ಬಳಿಕ ಆಕೆಯನ್ನು 2 ಲಕ್ಷಕ್ಕೆ ಮಾರಾಟ ಮಾಡಲಾಗಿದೆ. ಆಕೆಯನ್ನು ಖರೀದಿ ಮಾಡಿದವರು ಆಕೆಯ ಮೇಲೆ ನಿರಂತರ 24 ದಿನ ಅತ್ಯಾಚಾರ ನಡೆಸಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

Published On :
ಭೋಪಾಲ್: ಕೆಲಸ ನೀಡುವುದಾಗಿ ಮಹಿಳೆ ಅಪಹರಣ ಮಾಡಿ ಬಳಿಕ ಆಕೆಯನ್ನು 2 ಲಕ್ಷಕ್ಕೆ ಮಾರಾಟ ಮಾಡಲಾಗಿದೆ. ಆಕೆಯನ್ನು ಖರೀದಿ ಮಾಡಿದವರು ಆಕೆಯ ಮೇಲೆ ನಿರಂತರ 24 ದಿನ ಅತ್ಯಾಚಾರ ನಡೆಸಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.
ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಈ ಕೃತ್ಯವೆಸಗಲಾಗಿದ್ದು, ಅಪಹರಣಕಾರರು ಆಕೆಯನ್ನು 2 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ. ಬಳಿಕ ಆಕೆಯನ್ನು ಕೊಂಡವರು ನಿರಂತರ 24 ದಿನಗಳ ಕಾಲ ನಿರಂತರ ಅತ್ಯಾಚಾರ ವೆಸಗಿದ್ದಾರೆ. ಪ್ರಸ್ತುತ ಪೊಲೀಸರು ಆಕೆಯನ್ನು ರಕ್ಷಿಸಿದ್ದು, ಅತ್ಯಾಚಾರಿಗಳನ್ನು ಬಂಧಿಸಿದ್ದಾರೆ.
ಏನಿದು ಘಟನೆ?
30 ವರ್ಷದ ಮಹಿಳೆ ತನ್ನ ಪತಿಯಿಂದ ವಿಚ್ಛೇದನ ಪಡೆದಿದ್ದು, ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಸಂತ್ರಸ್ತೆಗೆ ಅಕ್ಟೋಬರ್ 28 ರಂದು ಅಪರಿಚಿತರೊಬ್ಬರು ಕರೆ ಮಾಡಿ ತಾವು ಸುಭಾಷ್ ಯಾದವ್ ಎಂದು ಹೇಳಿಕೊಂಡಿದ್ದಾರೆ. ಬಳಿಕ ತಿಂಗಳಿಗೆ 15 ಸಾವಿರ ವೇತನ ಸಿಗುವ ಕೆಲಸ ಕೊಡಿಸುವುದಾಗಿ ಹೇಳಿ ಭೇಟಿಯಾಗುವಂತೆ ತಿಳಿಸಿದ್ದಾರೆ. ಸಂತ್ರಸ್ತೆ ಕೆಲಸ ಸಿಗುತ್ತದೆಂದು ಭೋಪಾಲ್ ನ ಡಿಐಜಿ ಬಂಗಲೆ ಪ್ರದೇಶದಲ್ಲಿ ಅವರನ್ನು ಭೇಟಿಯಾಗಲು ಹೋಗಿದ್ದಾರೆ. ಅಲ್ಲಿ ವ್ಯಕ್ತಿಯೊಬ್ಬ ಆಕೆಯನ್ನು ಅಪಹರಿಸಿ ಇಂದೋರ್ ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಎರಡು ದಿನಗಳ ಕಾಲ ಉಳಿಸಿಕೊಂಡು ಅಲ್ಲಿಂದ ಅಕ್ಟೋಬರ್ 31ರಂದು ಆಕೆಯನ್ನು ಅಲ್ವಾರ್ ಗೆ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ 2 ಲಕ್ಷ ರೂ.ಗೆ ರೋಹಿತಾಶ್ ಮತ್ತು ಭೋಲರಾಂ ಎಂಬವರಿಗೆ ಮಾರಾಟ ಮಾಡಿದ್ದಾನೆ ಎಂದು ಪೊಲೀಸ್ ಅಧಿಕಾರಿ ಯುವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.
ಮಹಿಳೆ ನೀಡಿರುವ ಹೇಳಿಕೆ ಅನ್ವಯ ತನ್ನನ್ನು ಮಾರಾಟ ಮಾಡಿದ ಹಣವನ್ನು ರೋಹಿತ್ ಮತ್ತು ಸುಭಾಷ್ ಹಂಚಿಕೊಂಡಿದ್ದಾರೆ. ಬಳಿಕ ನನ್ನನ್ನು ಒಂದು ರೂಮಿನಲ್ಲಿ ಕೂಡಿ ಹಾಕಿ ಭೋಲಾರಂ ಅತ್ಯಾಚಾರ ಎಸಗಿದ್ದಾನೆ. ಅಷ್ಟೇ ಅಲ್ಲದೇ ದಿನಕ್ಕೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾರೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಒಡ್ಡಿದ್ದರು ಎಂದು ಮಹಿಳೆ ಹೇಳಿದ್ದಾರೆ. ಇತ್ತ ಮಹಿಳೆ ನಾಪತ್ತೆಯಾಗಿದ್ದಾಳೆ ಎಂದು ನವೆಂಬರ್ 11 ರಂದು ಕುಟುಂಬವರು ದೂರು ದಾಖಲಿಸಿದ್ದಾರೆ. ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಆದರೆ ಸಂತ್ರಸ್ತೆ ಫೋನ್ ಸ್ವಿಚ್ ಆಫ್ ಆಗಿದೆ. ಬಳಿಕ 2-3 ನಿಮಿಷ ಫೋನ್ ಆನ್ ಆಗಿದೆ. ಈ ವೇಳೆ ಪೋಲಿಸರು ನಂಬರ್ ಟ್ರ್ಯಾಕ್ ಮಾಡಿದ್ದು, ಬಳಿಕ ಸಂತ್ರಸ್ತೆ ಇದ್ದ ಸ್ಥಳ ಗೊತ್ತಾಗಿದೆ.
ಕೂಡಲೇ ಪೊಲೀಸರು ಹೋಗಿ ಸಂತ್ರಸ್ತೆಯನ್ನು ರಕ್ಷಿಸಿದ್ದಾರೆ. ಸದ್ಯಕ್ಕೆ ಪೊಲೀಸರು ಅಲ್ವಾರ್ ನಿವಾಸಿಗಳಾದ ರೋಹಿತ್ ಮತ್ತು ಭೋಲರಾಂ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು ಅವರಿಗಾಗಿ ಬಲೆ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Rahul Gandhiರಾಹುಲ್ ಗಾಂಧಿJaipurಜೈಪುರರಾಜಸ್ತಾನRajastanDattatreyaKashmiri Brahminದತ್ತಾತ್ರೆಯಕಾಶ್ಮೀರಿ ಬ್ರಾಹ್ಮಣ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


