ದೇಶ

ತೆಲಂಗಾಣದಲ್ಲಿ ವಾಯುಪಡೆಯ ತರಬೇತಿ ವಿಮಾನ ಪತನ, ಪೈಲಟ್ ಪಾರು

ಭಾರತೀಯ ವಾಯುಪಡೆಯ ತರಬೇತಿ ವಿಮಾನವೊಂದು ಬುಧವಾರ ತೆಲಂಗಾಣದ ಯಾದಗಿರಿಗುಟ್ಟ ಬಳಿ....

ತೆಲಂಗಾಣದಲ್ಲಿ ವಾಯುಪಡೆಯ ತರಬೇತಿ ವಿಮಾನ ಪತನ, ಪೈಲಟ್ ಪಾರು
ಪತನವಾದ ವಿಮಾನ
Published On :
ಹೈದರಾಬಾದ್​: ಭಾರತೀಯ ವಾಯುಪಡೆಯ ತರಬೇತಿ ವಿಮಾನವೊಂದು ಬುಧವಾರ ತೆಲಂಗಾಣದ ಯಾದಗಿರಿಗುಟ್ಟ ಬಳಿ ಪತನವಾಗಿದೆ. ತರಬೇತಿನಿರತ ಪೈಲಟ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೈದರಾಬಾದ್ ನಿಂದ ಸುಮಾರು 50 ಕಿ.ಮೀ. ದೂರದಲ್ಲಿ ಈ ಘಟನೆ ನಡೆದಿದ್ದು, ಹಕೀಂಪೇಟ್​ ಸೇನಾ ನೆಲೆಯಿಂದ ಈ ವಿಮಾನ ಟೇಕ್ ​ಆಫ್​​ ​ ಆಗಿತ್ತು. ಹಾರಾಟ ಆರಂಭಿಸಿದ ಕೆಲವೇ ಹೊತ್ತಿನಲ್ಲಿ ಬಹುಪೇಟಾದಲ್ಲಿ ವಿಮಾನ ನೆಲ ಕಚ್ಚಿದೆ. ಈ ವೇಳೆ ಪೈಲೆಟ್​ಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 
ಗಾಯಗೊಂಡ ಪೈಲಟ್ ಉತ್ತರ ಪ್ರದೇಶ ಮೂಲದ ಯೋಗೇಶ್ ಎಂದು ಗುರುತಿಸಲಾಗಿದೆ.
ವಿಮಾನ ಅಪಘಾತಕ್ಕೆ ಕಾರಣಗಳೇನು ಎಂಬುದು ಇನ್ನೂ ಬಹಿರಂಗಗೊಂಡಿಲ್ಲ. ತಾಂತ್ರಿಕ ಸಮಸ್ಯೆಯಿಂದ ವಿಮಾನ ಅಪಘಾತಕ್ಕೀಡಾಗಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆಗೆ ಕಾರಣವೇನು ಎಂಬುದು ತನಿಖೆಯ ನಂತರವೇ ಸಾಬೀತಾಗಬೇಕಿದೆ.
ಕಳೆದ ನವೆಂಬರ್ 21ರಂದು ರಾಜೀವ್ ಗಾಂಧಿ ವಿಮಾನಯಾನ ಅಕಾಡೆಮಿಯ ತರಬೇತಿ ವಿಮಾನವೊಂದು ರಂಗಾರೆಡ್ಡಿ ಜಿಲ್ಲೆಯಲ್ಲಿ ಇದೇ ರೀತಿ ಪತನವಾಗಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.