ಕರ್ತಾರ್ಪುರ ಕಾರಿಡಾರ್ ಓಕೆ, ಭಯೋತ್ಪಾದನೆ ಅಂತ್ಯಗೊಂಡರೆ ಮಾತ್ರ ಪಾಕ್ ಜೊತೆ ಮಾತುಕತೆ: ಸುಷ್ಮಾ ಸ್ವರಾಜ್
ಕರ್ತಾರ್ಪುರ ಕಾರಿಡಾರ್ ಯೋಜನೆಯ ವಿಚಾರವನ್ನು ಎರಡು ರಾಷ್ಟ್ರಗಳ ಮಾತುಕತೆಗಳೊಂದಿಗೆ ಹೋಲಿಕೆ ಮಾಡಬಾರದು. ಭಾರತದ ವಿರುದ್ಧ ಭಯೋತ್ಪಾದನೆ ಅಂತ್ಯಗೊಂಡರೆ ಮಾತ್ರ ಉಭಯ ರಾಷ್ಟ್ರಗಳೊಂದಿಗೆ...

Published On :
ನವದೆಹಲಿ: ಕರ್ತಾರ್ಪುರ ಕಾರಿಡಾರ್ ಯೋಜನೆಯ ವಿಚಾರವನ್ನು ಎರಡು ರಾಷ್ಟ್ರಗಳ ಮಾತುಕತೆಗಳೊಂದಿಗೆ ಹೋಲಿಕೆ ಮಾಡಬಾರದು. ಭಾರತದ ವಿರುದ್ಧ ಭಯೋತ್ಪಾದನೆ ಅಂತ್ಯಗೊಂಡರೆ ಮಾತ್ರ ಉಭಯ ರಾಷ್ಟ್ರಗಳೊಂದಿಗೆ ಮಾತುಕತೆ ಸಾಧ್ಯ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಬುಧವಾರ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ದ್ವಿಪಕ್ಷೀಯ ಮಾತುಕತೆ, ಕರ್ತಾರ್ಪುರ ಕಾರಿಡಾರ್ ಯೋಜನೆ ಪ್ರತ್ಯೇಕ ವಿಚಾರಗಳಾಗಿವೆ. ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದಲೂ ಕರ್ತಾರ್ಪುರ ಕಾರಿಡಾರ್ ಯೋಜನೆಗಾಗಿ ಪಾಕಿಸ್ತಾನ ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತಲೇ ಇತ್ತು. ಆದರೆ, ಇದೇ ಮೊದಲ ಬಾರಿಗೆ ಪಾಕಿಸ್ತಾನ ಸಕಾರಾತ್ಮಕ ಸ್ಪಂದನೆ ನೀಡಿರುವುದಕ್ಕೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.
ಆದರೆ, ಕರ್ತಾರ್ಪುರ ಕಾರಿಡಾರ್ ಯೋಜನೆಯಿಂದ ಎರಡು ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಮಾತುಕತೆಗಳು ನಡೆಯುವುದಿಲ್ಲ. ಭಯೋತ್ಪಾದನೆ, ದ್ವಿಪಕ್ಷೀಯ ಮಾತುಕತೆ ಎರಡೂ ಒಂದೆಡೆ ಸಾಗಲು ಸಾಧ್ಯವಿಲ್ಲ. ಭಾರತದ ವಿರುದ್ಧ ಪಾಕಿಸ್ತಾನ ಭಯೋತ್ಪಾದನಾ ಚಟುವಟಿಕೆಗಳನ್ನು ನಿಲ್ಲಿಸಿದಾಗ ಮಾತ್ರ, ಉಭಯ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಮಾತುಕತೆಗಳು ನಡೆಯುತ್ತವೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
indiaಭಾರತPakistanಪಾಕಿಸ್ತಾನSushma Swarajಸುಷ್ಮಾ ಸ್ವರಾಜ್Bilateral talksದ್ವಿಪಕ್ಷೀಯ ಮಾತುಕತೆKartarpur corridorಕರ್ತಾರ್ಪುರ ಕಾರಿಡಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


