ದೇಶ

ಶಬರಿಮಲೆ ಮತ್ತೊಂದು ಅಯೋಧ್ಯೆಯಾಗಲು ಬಿಡುವುದಿಲ್ಲ: ಕೇರಳ ಸಿಎಂ

ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ....

ಶಬರಿಮಲೆ ಮತ್ತೊಂದು ಅಯೋಧ್ಯೆಯಾಗಲು ಬಿಡುವುದಿಲ್ಲ: ಕೇರಳ ಸಿಎಂ
ಪಿಣರಾಯ್ ವಿಜಯನ್
Published On :
ತಿರುವನಂತಪುರಂ: ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಬುಧವಾರ ಹೇಳಿದ್ದಾರೆ.
ಕೇರಳದಲ್ಲಿ ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸದಸ್ಯರು ಶಬರಿಮಲೆಯಲ್ಲಿ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಸದನದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಪಕ್ಷಗಳ ಒತ್ತಾಯಕ್ಕೆ ಮಣಿಯದ ಸಿಎಂ ವಿಜಯನ್, ಶಬರಿಮಲೆಯಲ್ಲಿ ನಿಷೇಧಾಜ್ಞೆ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ನಾವು ಸುಪ್ರೀಂ ಕೋರ್ಟ್ ತೀರ್ಪನ್ನು ಅನುಸರಿಸಬೇಕಾಗಿದೆ. ಆದರೆ ಕಾಂಗ್ರೆಸ್ ಬೆಂಬಲದೊಂದಿಗೆ ಸಂಘ ಪರಿವಾರ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿ ಸಮಸ್ಯೆ ಸೃಷ್ಟಿಸುತ್ತಿದೆ ಎಂದು ಕೇರಳ ಸಿಎಂ ಆರೋಪಿಸಿದ್ದಾರೆ.
ಯಾವುದೇ ಕಾರಣಕ್ಕೂ ಶಬರಿಮಲೆಯನ್ನು ಮತ್ತೊಂದು ಅಯೋಧ್ಯೆ ಮಾಡಲು ಬಿಡುವುದಿಲ್ಲ ಮತ್ತು ನಿಷೇಧಾಜ್ಞೆಯನ್ನು ಹಿಂಪಡೆಯುವ ಮಾತೇ ಇಲ್ಲ ಎಂದು ಪಿಣರಾಯ್ ವಿಜಯನ್ ಅವರು ಖಡಕ್ ಆಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.