ದೇಶ

ಪುಲ್ವಾಮದಲ್ಲಿ ಮತ್ತೆ ಇಬ್ಬರು ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಅಟ್ಟಹಾಸ ಗೈಯ್ಯಲು ಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕಿದೆ.

ಪುಲ್ವಾಮದಲ್ಲಿ ಮತ್ತೆ ಇಬ್ಬರು ಉಗ್ರರ ಹೆಡೆಮುರಿ ಕಟ್ಟಿದ ಭಾರತೀಯ ಸೇನೆ!
ಸಂಗ್ರಹ ಚಿತ್ರ
Published On :
ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಅಟ್ಟಹಾಸ ಗೈಯ್ಯಲು ಯತ್ನಿಸಿದ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಮಟ್ಟ ಹಾಕಿದೆ.
ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನೆ ಮೇಲೆ ದಾಳಿ ಮಾಡಲು ಯತ್ನಿಸಿದ ಇಬ್ಬರು ಉಗ್ರರನ್ನು ಸೈನಿಕರು ಹೊಡೆದುರುಳಿಸಿದ್ದಾರೆ. ಪುಲ್ವಾಮಾ ಜಿಲ್ಲೆಯ ಆವಂತಿಪೋರಾ ಪ್ರದೇಶದ ಶಾರ್ಷಾಲ್ ನಲ್ಲಿ ಉಗ್ರರನ್ನು ಹೊಡದುರುಳಿಸಲಾಗಿದೆ. ಅಂತೆಯೇ ಘಟನಾ ಪ್ರದೇಶದಲ್ಲಿ ಮತ್ತಷ್ಟು ಉಗ್ರರು ಅಡಗಿರುವ ಕುರಿತು ಶಂಕೆ ವ್ಯಕ್ತವಾಗಿದ್ದು, ತೀವ್ರ ಶೋಧ ನಡೆಸಲಾಗುತ್ತಿದೆ.
ಹತರಾದ ಉಗ್ರರ ಶವಗಳನ್ನು ಸೇನೆ ವಶಪಡಿಸಿಕೊಂಡಿದ್ಜು, ಅಂತೆಯೇ ಉಗ್ರರಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈವರೆಗೂ ಮೃತ ಉಗ್ರರ ಗುರುತು ಪತ್ತೆಯಾಗಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.