ತೆಲಂಗಾಣ ಚುನಾವಣೆ: ಬಿಜೆಪಿ ಪ್ರಣಾಳಿಕೆ ಬಿಡುಗಡೆ, ಉಚಿತ ಹಸು ವಿತರಣೆ ಭರವಸೆ
ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, 2 ಲಕ್ಷ ರೂವರೆಗೂ ರೈತರ ಸಾಲ ಮನ್ನಾ ಸೇರಿದಂತೆ ಪ್ರತಿವರ್ಷ ಒಂದು ಲಕ್ಷ ಜನರಿಗೆ ಉಚಿತವಾಗಿ ಹಸು ವಿತರಿಸುವುದಾಗಿ ಭರವಸೆ ನೀಡಲಾಗಿದೆ.

ಹೈದ್ರಾಬಾದ್ : ಡಿಸೆಂಬರ್ 7 ರಂದು ನಡೆಯಲಿರುವ ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, 2 ಲಕ್ಷ ರೂವರೆಗೂ ರೈತರ ಸಾಲ ಮನ್ನಾ, ಪದವಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಲ್ಯಾಪ್ ಟಾಪ್ ವಿತರಣೆ, ಪ್ರತಿವರ್ಷ ಒಂದು ಲಕ್ಷ ಜನರಿಗೆ ಉಚಿತವಾಗಿ ಹಸು ವಿತರಿಸುವುದಾಗಿ ಭರವಸೆ ನೀಡಲಾಗಿದೆ.
ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಲಕ್ಷ್ಮಣ್ ಇಂದು ಬಿಡುಗಡೆಗೊಳಿಸಿದ ಪ್ರಣಾಳಿಕೆಯಲ್ಲಿ, ಹಣ ಮತ್ತಿತರ ಆಮಿಷವೊಡ್ಡಿ ಬಲವಂತದಿಂದ ಧರ್ಮಾಂತರ ಮಾಡುವುದಕ್ಕೆ ಶಾಸನದ ಮೂಲಕ ತಡೆಹಾಕಲಾಗುವುದು ಎಂದು ಭರವಸೆ ನೀಡಿದೆ.
ಬಾಂಗ್ಲಾದೇಶದಿಂದ ಅಕ್ರಮವಾಗಿ ವಲಸೆ ಬಂದಿರುವ ರೋಹಿಂಗ್ಯಾ ಜನರನ್ನು ವಾಪಾಸ್ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರತಿಯೊಬ್ಬ ರೈತರಿಗೂ ಉಚಿತವಾಗಿ ಕೊಳಬೆ ಬಾವಿ ತೋರಿಸಿ ಗುಣಮಟ್ಟದ ಬೀಜ ವಿತರಣೆ ಮಾಡುವುದಾಗಿ ಹೇಳಲಾಗಿದೆ.
7ರಿಂದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್. ಪದವಿ ಹಾಗೂ ಅದಕ್ಕೂ ಮೇಲ್ಪಟ್ಟ ವಿದ್ಯಾರ್ಥಿನಿಯರು ಸ್ಕೂಟಿ ಪಡೆಯಲು ಶೇ.50 ರಷ್ಟು ಸಹಾಯ ಧನ ನೀಡಲಾಗುವುದು, 2022ರೊಳಗೆ ಎಲ್ಲಾ ಬಡವರಿಗೂ ಮನೆ ಕಟ್ಟಿಸಿಕೊಳ್ಳಲಾಗುವುದು ಎಂದು ಬಿಜೆಪಿ ಭರವಸೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


