ದೇಶ

ದೆಹಲಿ ಮಂತ್ರಿ ಸತ್ಯೇಂದರ್ ಜೈನ್ ವಿರುದ್ಧ ಕಾನೂನು ಕ್ರಮಕ್ಕೆ ಕೇಂದ್ರ ಸರ್ಕಾರ ಅಸ್ತು

ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಕುಮಾರ್ ಜೈನ್ ಅವರ ಕಾನೂನು ಬಾಹಿರ ಆಸ್ತಿ ವಶಪಡಿಸಿಕೊಳ್ಳಲು ಸಿಬಿಐಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೆಹಲಿ ಮಂತ್ರಿ ಸತ್ಯೇಂದರ್ ಜೈನ್ ವಿರುದ್ಧ ಕಾನೂನು ಕ್ರಮಕ್ಕೆ ಕೇಂದ್ರ ಸರ್ಕಾರ ಅಸ್ತು
ಸತ್ಯೇಂದರ್ ಕುಮಾರ್ ಜೈನ್
Published On :
ನವದೆಹಲಿ: ದೆಹಲಿಯ ಆರೋಗ್ಯ ಸಚಿವ ಸತ್ಯೇಂದರ್ ಕುಮಾರ್ ಜೈನ್ ಅವರ ಕಾನೂನು ಬಾಹಿರ ಆಸ್ತಿ ವಶಪಡಿಸಿಕೊಳ್ಳಲು ಸಿಬಿಐಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಜೈನ್ ಕಳೆದ ಐದು ವರ್ಷಗಳಿಂದ ದೆಹಲಿಯ ಸುತ್ತಮುತ್ತ 200 ಬಿಘಾಸ್ (1 ಎಕರೆ= 4 ಬಿಘಾ) ಕೃಷಿ ಭೂಮಿಯನ್ನು ಬೇರೆ ಬೇರೆ ಸಂಸ್ಥೆಗಳ ಹೆಸರಲ್ಲಿ ಖರೀದಿಸಿದ್ದಾರೆ. ಅವರು ಇದಕ್ಕಾಗಿ  ಹಲವಾರು ಕೋಟಿ ರೂಪಾಯಿಗಳ ಅಕಪ್ಪು ಹಣವನ್ನು ಬಳಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.
2017 ರ ಆಗಸ್ಟ್ 24 ರಂದು ಸಿಬಿಐ ಈ ಸಂಬಂಧ ಪ್ರಕರಣ ದಾಖಲಿಸಿತ್ತು. ಇದೀಗ ಕೇಂದ್ರ ಗೃಹ ವ್ಯವಹಾರ ಸಚಿವಾಲಯವು ಜೈನ್ ಅವರ ಅಕ್ರಮ ಆಸ್ತಿಯ ವಶಕ್ಕೆ ಅನುಮತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.