ಬಿಕಾನೇರ್ ಭೂ ಹಗರಣ: ರಾಬರ್ಟ್ ವಾದ್ರಾಗೆ ಇಡಿ ಸಮನ್ಸ್
ರಾಜಸ್ಥಾನದ ಬಿಕಾನೇರ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.

Published On :
ನವದೆಹಲಿ: ರಾಜಸ್ಥಾನದ ಬಿಕಾನೇರ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಶುಕ್ರವಾರ ಸಮನ್ಸ್ ಜಾರಿ ಮಾಡಿದೆ.
ಜಾರಿ ನಿರ್ದೇಶನಾಲಯ ವಾದ್ರಾ ವಿರುದ್ಧ ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆಗೆ ಹಾಜರಾಗುವಂತೆ ಇಂದು ಎರಡನೇ ಬಾರಿ ಸಮನ್ಸ್ ಜಾರಿ ಮಾಡಿದೆ.
ಇಡಿ ಕಳೆದ ನವೆಂಬರ್ ನಲ್ಲೂ ವಾದ್ರಾಗೆ ಸಮನ್ಸ್ ಜಾರಿ ಮಾಡಿತ್ತು. ಆದರೆ ವಿಚಾರಣೆಗೆ ಹಾಜರಾಗದ ವಾದ್ರಾಗೆ ಈಗ ಮತ್ತೊಂದು ಸಮನ್ಸ್ ಜಾರಿ ಮಾಡಿದ್ದು, ಮುಂದಿನ ವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಡಿಸೆಂಬರ್ 22ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಅಕ್ರಮ ಹಣ ವಹಿವಾಟು ನಡೆಸಿದ ಆರೋಪದ ಮೇಲೆ ಜೈಪ್ರಕಾಶ್ ಬಗರ್ವ ಮತ್ತು ಅಶೋಕ್ ಕುಮಾರ್ ಅವರನ್ನು ಬಂಧಿಸಿದ್ದರು.
ರಾಜಸ್ಥಾನದ ಬಿಕಾನೇರ್ ನಲ್ಲಿ 2009ರಿಂದ 2011ರವರೆಗೆ ಕೆಲವು ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಭೂಮಿ ಖರೀದಿಸಿ, ಅದನ್ನು ವಾದ್ರಾ ಒಡೆತನದ ಸ್ಕೈಲೈಟ್ ಸೇರಿದಂತೆ ಹಲವು ಕಂಪನಿಗಳಿಗೆ ಮಾರಾಟ ಮಾಡಿದ್ದರು. ಈ ಸಂಬಂಧ ಇಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


