ದೇಶ

ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ: ವಿಜಯ್ ಸರ್ ದೇಸಾಯಿ

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಗೋವಾ ಫಾರ್ವರ್ಡ್ ಪಕ್ಷದ ಮುಖ್ಯಸ್ಥ ವಿಜಯ್ ...

ಮುಖ್ಯಮಂತ್ರಿ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ: ವಿಜಯ್ ಸರ್ ದೇಸಾಯಿ
ಮನೋಹರ್ ಪರಿಕ್ಕರ್
Published On :
ಪಣಜಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ಗೋವಾ ಫಾರ್ವರ್ಡ್ ಪಕ್ಷದ ಮುಖ್ಯಸ್ಥ ವಿಜಯ್ ಸರ್ ದೇಸಾಯಿ ಹೇಳಿದ್ದಾರೆ.
ಮನೋಹರ್ ಪರಿಕ್ಕರ್ ಅವರ ಸಂಪುಟದಲ್ಲಿ ವಿಜಯ್ ಸರ್ ದೇಸಾಯಿ ಕೃಷಿ ಸಚಿವರಾಗಿದ್ದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯಕ್ಕೊಳಗಾಗಿರುವ ಪರಿಕ್ಕರ್ ಅವರನ್ನು ಹುದ್ದೆಯಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ಅಕ್ಟೋಬರ್ 14ರಿಂದ ದೆಹಲಿಯ ಏಮ್ಸ್ ನಲ್ಲಿ ದಾಖಲಾಗಿದ್ದಾರೆ. ವಿರೋಧ ಪಕ್ಷಗಳ ನಾಯಕರು ಮನೋಹರ್ ಪರಿಕ್ಕರ್ ಅವರನ್ನು ಸಿಎಂ ಹುದ್ದೆಯಿಂದ ಬದಲಾಯಿಸಬೇಕು ಎಂದು ಆಗ್ರಹಿಸಿದ್ದಾರೆ, ಆದರೆ ಬಿಜೆಪಿ ಮಾತ್ರ ಪರಿಕ್ಕರ್ ಅವರನ್ನು ಬದಲಾಯಿಸಲು ಹಿಂದೇಟು ಹಾಕುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.