ದೇಶ

ಸಂಸತ್ತು ಬೀದಿ ತಲುಪಿದ ಪ್ರತಿಭಟನಾನಿರತ ರೈತರು: ದೆಹಲಿಯಲ್ಲಿ ಭಾರೀ ಸಂಚಾರ ದಟ್ಟಣೆ

ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ರೈತರ ದಂಡು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾನಿರತ ರೈತರು ಸಂಸತ್ತು ತಲುಪಿದ್ದಾರೆ...

ಸಂಸತ್ತು ಬೀದಿ ತಲುಪಿದ ಪ್ರತಿಭಟನಾನಿರತ ರೈತರು: ದೆಹಲಿಯಲ್ಲಿ ಭಾರೀ ಸಂಚಾರ ದಟ್ಟಣೆ
ಪ್ರತಿಭಟನಾನಿರತ ರೈತರು (ಸಂಗ್ರಹ ಚಿತ್ರ)
Published On :
ನವದೆಹಲಿ: ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ದೇಶದ ವಿವಿಧ ಭಾಗಗಳಿಂದ ಸಾವಿರಾರು ರೈತರ ದಂಡು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾನಿರತ ರೈತರು ಸಂಸತ್ತು ತಲುಪಿದ್ದಾರೆ. 
ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ರಾಜಧಾನಿ ದೆಹಲಿಯಲ್ಲಿ ಭಾರಿ ಸಂಚಾರ ದಟ್ಟಣೆ ಎದುರಾಗಿದೆ ಎಂದು ವರದಿಗಳು ತಿಳಿಸಿವೆ. 
ಪ್ರತಿಭಟನೆಗೆ ಕರ್ನಾಟಕ, ಉತ್ತರಪ್ರದೇಶ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಗುಜರಾತ್ ಮತ್ತು ಮಧ್ಯಪ್ರದೇಶ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ದಹಲಿಗೆ ರೈತರು ಆಗಮಿಸಿದ್ದಾರೆ. 
ನಿನ್ನೆ ಮಧ್ಯಾಹ್ನ ರಾಮ್ ಲೀಲಾ ಮೈದಾನ ಸೇರಿದ್ದ ರೈತ ಸಮುದಾಯ, ಅಯೋಧ್ಯೆ ಬೇಡ, ಸಾಲ ಮನ್ನಾ ಬೇಕು ಎಂಬ ಘೋಷಣೆಗಳನ್ನು ಕೂಗುವ ಮೂಲಕ, ತಮ್ಮ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರುವ ಯತ್ನ ಮಾಡಿತ್ತು. 
ರೈತರು, ಕೃಷಿ ಕಾರ್ಮಿಕರು ಸೇರಿದಂತ ಒಟ್ಟು 207 ರೈತ ಸಂಘಟನೆಗಳು, ತಮ್ಮ ಬೇಡಿಕೆಗಾಗಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಹಕಾರ ಸಮಿತಿ ಬ್ಯಾನರ್ ಅಡಿ ಒಟ್ಟುಗೂಡಿವೆ. ಈ ಸಂದರ್ಭದಲ್ಲಿ ರಾಷ್ಟ್ರೀಯ ದಕ್ಷಿಣ ಭಾರತ ನದಿ ಜೋಡಮ ಕೃಷಿ ಸಂಘಟನೆಯ 1200 ಸದಸ್ಯರು, ಆತ್ಮಹತ್ಯೆಗ ಶರಣಾದ ಇಬ್ಬರು ರೈತರ ತಲೆಬುರುಡೆ ಹೊತ್ತು ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಶುಕ್ರವಾರದ ಸಂಸತ್ ರ್ಯಾಲಿಗೆ ಅವಕಾಶ ನೀಡದಿದ್ದಲ್ಲಿ ನಗ್ನ ಮೆರವಣಿಗೆ ಮಾಡುವುದಾಗಿ ತಮಿಳುನಾಡು ರೈತರು ಬೆದರಿಕೆ ಹಾಕಿದ್ದಾರೆ. 
ಇದರಂತೆ ಇಂದು ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ, ರೈತರು, ಸಂಸತ್ತಿನಲ್ಲಿ ಕಾಲ್ನಡಿಗೆ ಜಾಥಾ ನಡೆಸಲಿದ್ದಾರೆ. 
ಈಗಾಗಲೇ ರಾಮ್ ಲೀಲಾ ಮೈದಾನದಿಂದ ಸಾವಿರಾರು ರೈತರು ಸಂಸತ್ ನತ್ತ ಹೆಜ್ಜೆ ಹಾಕಿದ್ದು, ಭದ್ರತೆಗಾಗಿ 3,500 ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.