ರಾಹುಲ್ ಗಾಂಧಿಯೇ ನನ್ನನ್ನು ಪಾಕಿಸ್ತಾನಕ್ಕೆ ಕಳಿಸಿದ್ರು: ಕರ್ತಾರ್ ಪುರ್ ಭೇಟಿಗೆ ಸಿಧು ಸ್ಪಷ್ಟನೆ
ಇತ್ತೀಚೆಗೆ ನಡೆದ ಕರ್ತಾರ್ ಪುರ್ ಕಾರಿಡಾರ್ ಯೋಜನೆ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲು ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಪಾಕಿಸ್ತಾನಕ್ಕೆ ತೆರಳಿದ್ದರ ಹಿಂದೆ....

Published On :
ಅಮೃತಸರ್: ಇತ್ತೀಚೆಗೆ ನಡೆದ ಕರ್ತಾರ್ ಪುರ್ ಕಾರಿಡಾರ್ ಯೋಜನೆ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲು ಮಾಜಿ ಕ್ರಿಕೆಟಿಗ, ರಾಜಕಾರಣಿ ನವಜೋತ್ ಸಿಂಗ್ ಸಿಧು ಪಾಕಿಸ್ತಾನಕ್ಕೆ ತೆರಳಿದ್ದರ ಹಿಂದೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಆದೇಶವೇ ಕಾರಣವೆನ್ನುವುದು ಈಗ ಬಹಿರಂಗವಾಗಿದೆ. ಸಿಧು ಸ್ವತಃ ಈ ಕುರಿತು ಹೇಳಿಕೆ ನೀಡಿದ್ದು "ರಾಹುಲ್ ಗಾಂಧಿ ನನ್ನನ್ನು ಕರ್ತಾರ್ ಪುರ ಕಾರಿಡಾರ್ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಲು ಪಾಕ್ ಗೆ ತೆರಳುವಂತೆ ಹೇಳಿದ್ದರು" ಎಂದಿದ್ದಾರೆ.
ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರಿಗೆ ಸಿಧು ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಭಿನ್ನಾಭಿಪ್ರಾಯವಿತ್ತು ಎನ್ನಲಾಗಿದ್ದು ಈ ಸಂಬಂಧ ಅವರು ಸಿಧು ಪಾಕ್ ಭೇಟಿಯನ್ನು ಮಾನ್ಯ ಮಾಡಲು ನಿರಾಕರಿಸಿದ್ದರು.ಅಮೃತಸರ್ ನಲ್ಲಿ ನಡೆದ ಧಾರ್ಮಿಕ ಸಭೆ ಮೇಲೆ ಪಾಕ್ ಐಎಸ್ ಐ ಪ್ರಚೋದಿತ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದರು. ಈ ದಾಳಿಉಯಲ್ಲಿ ಮೂವರು ಸಾವನ್ನಪ್ಪಿದ್ದರು. ಹೀಗಾಗಿ ತಮ್ಮ ಸಂಪುಟ ಸಹೋದ್ಯೋಗಿಯಾಗಿರುವ ಸಿಧು ಪಾಕ್ ಭೇಟಿಯನ್ನು ತಡೆಯಲು ಅವರು ಪ್ರಯತ್ನಿಸಿದ್ದರು.
"ರಾಹುಲ್ ಗಾಂಧಿ ನನ್ನ ನಾಯಕ. ಅವರೇ ನನ್ನನ್ನು ಪಾಕಿಸ್ತಾನಕ್ಕೆ ಕಳಿಸಿದ್ದರು" ಸಿಧು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ ಅಲ್ಲದೆ ಸಿಧು ಪಾಕ್ ಭೇಟಿಯನ್ನು 50-100 ಕಾಂಗ್ರೆಸ್ ನಾಯಕರು ಬೆಂಬಲಿಸಿದ್ದಾಗಿ ಸಹ ಅವರು ಹೇಳಿಕೊಂಡಿದ್ದಾರೆ.
ಇಷ್ಟಾಗಿ ಸಿಧು ಪಂಜಾಬ್ ಸಿಎಂ ಅಮರೀಂದರ್ ಸಿಂಗ್ ತನಗೆ ತಂದೆ ಸಮಾನ ಎಂದು ಹೇಳಿಕೆ ನಿಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Pakistanಪಾಕಿಸ್ತಾನRahul Gandhiರಾಹುಲ್ ಗಾಂಧಿನವಜೋತ್ ಸಿಂಗ್ ಸಿಧುNavjot Singh SidhuAmarinder Singhಅಮರೀಂದರ್ ಸಿಂಗ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


