ದೇಶ

ಎಐಸಿಸಿ ಕಾರ್ಯದರ್ಶಿ ಹುದ್ದೆಯಿಂದ ಪ್ರಿಯಾ ದತ್ ವಜಾ!

ಕಾಂಗ್ರೆಸ್ ನಿಷ್ಠಾವಂತ ನಾಯಕಿ ಹಾಗೂ ಮಾಜಿ ಸಂಸದೆ ಪ್ರಿಯಾ ದತ್ ಅವರನ್ನು ಎಐಸಿಸಿ ಕಾರ್ಯದರ್ಶಿ ಸ್ಥಾನದಿಂದ...

ಎಐಸಿಸಿ ಕಾರ್ಯದರ್ಶಿ ಹುದ್ದೆಯಿಂದ ಪ್ರಿಯಾ ದತ್ ವಜಾ!
ಪ್ರಿಯಾ ದತ್
Published On :
ನವದೆಹಲಿ: ಕಾಂಗ್ರೆಸ್ ನಿಷ್ಠಾವಂತ ನಾಯಯಕಿ ಹಾಗೂ ಮಾಜಿ ಸಂಸದೆ  ಪ್ರಿಯಾ ದತ್ ಅವರನ್ನು ಎಐಸಿಸಿ ಕಾರ್ಯದರ್ಶಿ ಸ್ಥಾನದಿಂದ ವಜಾ ಮಾಡಲಾಗಿದೆ,
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಿಯಾ ದತ್ ಎಐಸಿಸಿ ಕಾರ್ಯದರ್ಶಿಯ ಎಲ್ಲಾ  ಕರ್ತವ್ಯಗಳಿಂದ ನನ್ನನ್ನು ಬಿಡುಗಡೆ ಮಾಡಲಾಗಿದೆ, ಈ ಸಂಬಂಧ ನನಗೆ ಲೆಟರ್ ಸಿಕ್ಕಿದೆ,  ನಾನು ಎಲ್ಲರಿಗೂ ಧನ್ಯವಾದ ಹೇಳುತ್ತೇನೆ,  ಇಷ್ಟು ವರ್ಷ ಪಕ್ಷದಲ್ಲಿ ದುಡಿಯಲು ಅವಕಾಶ ನೀಡಿದ್ದ ರಾಹುಲ್ ಗಾಂಧಿ ಅವರಿಗೆ ನಾನು ಆಭಾರಿಯಾಗಿದ್ದೇನೆ, ಎಐಸಿಸಿ ನನ್ನ ಎಲ್ಲಾ ಸಹೋದ್ಯೋಗಿಗಳಿಗೆ ಹಾಗೂ ನನಗೆ ಮಾರ್ಗದರ್ಶನ ನೀಡಿದ ಎಲ್ಲರಿಗೂ ಧನ್ಯವಾದ ಎಂದು ಹೇಳಿದ್ದಾರೆ.
ಪ್ರಿಯಾ ದತ್ ಕಾಂಗ್ರೆಸ್ ತೊರೆಯುವರೇ ಎಂಬ ಪ್ರಶ್ನೆ ಕೇಳಿ ಬಂದಿದೆ,.ಆದರೆ ಈ ಸಂಬಂಧ ಪ್ರಿಯಾ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ, 
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ವಿರುದ್ಧವಾಗಿ ಪ್ರಿಯಾ ಟ್ವೀಟ್ ಮಾಡಿದ್ದರು, ಕಾಂಗ್ರೆಸ್ ಅನ್ನು ಕಾಂಗ್ರೆಸ್ ನಾಶ ಮಾಡುತ್ತಿದೆ, ರೋಗಗ್ರಸ್ಥ ಕಾಂಗ್ರೆಸ್ ಅನ್ನು ಆರೋಗ್ಯಯುತವಾಗಿಸಲು ಚಿಕಿತ್ಸೆ ನೀಡಬೇಕು ಎಂದು ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.