ನಮ್ಮ ಆಹಾರ ಸೇವನೆ ಆಯ್ಕೆ ವೈಯಕ್ತಿಕವಲ್ಲದ ಕಾಲಘಟ್ಟದಲ್ಲಿ ಬದುಕುತ್ತಿದ್ದೇವೆ: ನಿಯೋಜಿತ ಸಿಜೆಐ ರಂಜನ್ ಗೋಗೋಯ್
ನಮ್ಮ ಆಹಾರ ಸೇವನೆ ಆಯ್ಕೆ, ಉಡುಪಿನ ಸ್ವಾತಂತ್ಯ ವೈಯಕ್ತಿಕವಾಗಿ ಉಳಿಯದ ಕಾಲಘಟ್ಟದಲ್ಲಿ ನಾವು ಬದುಕುತ್ತಿದ್ದೇವೆ, ಸಾಂವಿಧಾನಿಕ ಆದರ್ಶಗಳಿಗೆ ಬದ್ಧವಾಗಿರುವುದಕ್ಕೆ ವಿಫಲರಾದರೆ ದ್ವೇಷ,

Published On :
ನವದೆಹಲಿ: ನಮ್ಮ ಆಹಾರ ಸೇವನೆ ಆಯ್ಕೆ, ಉಡುಪಿನ ಸ್ವಾತಂತ್ಯ ವೈಯಕ್ತಿಕವಾಗಿ ಉಳಿಯದ ಕಾಲಘಟ್ಟದಲ್ಲಿ ನಾವು ಬದುಕುತ್ತಿದ್ದೇವೆ, ಸಾಂವಿಧಾನಿಕ ಆದರ್ಶಗಳಿಗೆ ಬದ್ಧವಾಗಿರುವುದಕ್ಕೆ ವಿಫಲರಾದರೆ ದ್ವೇಷ, ಹತ್ಯೆಗಳು ಮುಂದುವರೆಯುತ್ತಲೇ ಇರುತ್ತದೆ ಎಂದು ನಿಯೋಜಿತ ಸಿಜೆಐ ರಂಜನ್ ಗೋಗೋಯ್ ಅಭಿಪ್ರಾಯಪಟ್ಟಿದ್ದಾರೆ.
ನಿರ್ಗಮಿತ ಸಿಜೆಐ ದೀಪಕ್ ಮಿಶ್ರಾ ಬೀಳ್ಕೊಡುಗೆ ಹಿನ್ನೆಲೆಯಲ್ಲಿ ಮಾತನಾಡಿರುವ ನಿಯೋಜಿತ ಸಿಜೆಐ ರಂಜನ್ ಗೋಗೋಯ್, ನ್ಯಾ.ದೀಪಕ್ ಮಿಶ್ರಾ ಅವರನ್ನು ಹೊಗಳಿದ್ದು, ನಾಗರಿಕ ಸ್ವಾತಂತ್ರ್ಯಕ್ಕೆ ದೀಪಕ್ ಮಿಶ್ರಾ ಅವರ ಕೊಡುಗೆ ಅಪಾರವಾದದ್ದು ಎಂದು ಹೇಳಿದ್ದು ಈ ನಿಟ್ಟಿನಲ್ಲಿ ದೀಪಕ್ ಮಿಶ್ರಾ ಅವರು ನೀಡಿದ್ದ ತೀರ್ಪುಗಳನ್ನು ಉಲ್ಲೇಖಿಸಿದ್ದಾರೆ.
ಅ.2 ರಂದು ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಲಿರುವ ಗೋಗೋಯ್ ದೀಪಕ್ ಮಿಶ್ರಾ ಅವರು ಅಸಮಾನ್ಯ ನ್ಯಾಯಾಧೀಶರೆಂದು ಹೇಳಿದ್ದಾರೆ. " ಸಾಂವಿಧಾನಿಕ ಆದರ್ಶಗಳಿಗೆ ಬದ್ಧವಾಗಿರುವುದಕ್ಕೆ ವಿಫಲರಾದರೆ ದ್ವೇಷ, ಹತ್ಯೆಗಳು ಮುಂದುವರೆಯುತ್ತಲೇ ಇರುತ್ತದೆಯೆಂದಿರುವ ನಿಯೋಜಿತ ಸಿಜೆಐ, ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರು ಸಾಂವಿಧಾನಿಕ ಆದರ್ಶಗಳಿಗೆ ಬದ್ಧರಾಗಿದ್ದಾರೆ, ಮುಂದೆಯೂ ಬದ್ಧರಾಗಿರುತ್ತಾರೆ ಎಂದೂ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


