ಬಿಜೆಪಿ ಸರ್ಕಾರದ ಆಡಳಿತ ಬ್ರಿಟಿಷ್ ರಾಜ್ ಆಳ್ವಿಕೆಯಂತಿದೆ: ಕಾಂಗ್ರೆಸ್
ಬಿಜೆಪಿ ಸರ್ಕಾರಕ್ಕೂ ಬ್ರಿಟಿಷ್ ಆಡಳಿತಕ್ಕೂ ಒಂದೇ ರೀತಿಯ ಹೋಲಿಕೆ ಇದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ....

Published On :
ನವದೆಹಲಿ: ಬಿಜೆಪಿ ಸರ್ಕಾರಕ್ಕೂ ಬ್ರಿಟಿಷ್ ಆಡಳಿತಕ್ಕೂ ಒಂದೇ ರೀತಿಯ ಹೋಲಿಕೆ ಇದೆ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ದಾರಿಯಲ್ಲಿ ನಡೆಯಬೇಕು ಎಂದು ಸಲಹೆ ನೀಡಿದ್ದಾರೆ.
ವಾರ್ದಾದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಂತರ ಮಾತನಾಡಿದ ಸುರ್ಜೇವಾಲಾ ದೇಶದಲ್ಲಿ ಸುಳ್ಳು, ಲೂಟಿ, ಮುಕ್ತಿ ಕಾ ಸಂಗ್ರಾಮ್ ನಡೆಯುತ್ತಿದೆ, ಸೇವಾಗ್ರಾಮದಲ್ಲಿ 76 ವರ್ಷಗಳ ನಂತರ ಕಾಂಗ್ರೆಸ್ ಸಭೆ ನಡೆಸುತ್ತಿದೆ ಎಂದರು.
ಬಿಜೆಪಿ ಸರ್ಕಾರ ಬ್ರಿಟಿಷ್ ರಾಜ್ ನಂತಿದೆ, ಆರ್ ಎಸ್ ಎಸ್ ಬ್ರಿಟಿಷರಿಗೆ ಗುಲಾಮರಾಗಿತ್ತು, ಹಿಂಸೆ, ಧ್ವೇಷ ಮತ್ತು ವಿಭಜನೆ ಆರ್ ಎಸ್ ಎಸ್ ನ ಮೂಲ ಮಂತ್ರ, ಆದರೆ ಹಿರಿಯರಾದ ಮೋಹನ್ ಭಾಗವತ್ ಅವರಿಗೆ ಕಾಂಗ್ರೆಸ್ ಗೌರವ ನೀಡುತ್ತದೆ, ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಕೊಡುಗೆ ಬಹಳವಿದೆ, ಇದನ್ನು ಪ್ರತಿಯೊಬ್ಬರು ಒಪ್ಪಿಕೊಳ್ಳಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್ಬಿಜೆಪಿ ಸರ್ಕಾರBJP governmentBritish Rajಬ್ರಿಟಿಷ್ ರಾಜ್Randeep Singh Surjewalaರಣದೀಪ್ ಸಿಂಗ್ ಸುರ್ಜೇವಾಲಾ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


