ದೇಶ

ಈಗ ರೈತರು ವಾಯುಮಾರ್ಗದ ಮೂಲಕವೂ ದೆಹಲಿ ಪ್ರವೇಶಿಸಲಾರರು: ರಾಹುಲ್ ಗಾಂಧಿ

ಅಂತರಾಷ್ಟ್ರೀಯ ಅಹಿಂಸಾ ದಿನ್ವಾದ ಮಹಾತ್ಮ ಗಾಂಧಿ ಜನ್ಮ ದಿನದಂದೇ ದೆಹಲಿ ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿ ಬಿಜೆಪಿ ನೇತೃತ್ವದ ಕೇಂದ್ರ.....

ಈಗ ರೈತರು ವಾಯುಮಾರ್ಗದ ಮೂಲಕವೂ ದೆಹಲಿ ಪ್ರವೇಶಿಸಲಾರರು: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :
ನವದೆಹಲಿ: ಅಂತರಾಷ್ಟ್ರೀಯ ಅಹಿಂಸಾ ದಿನ್ವಾದ ಮಹಾತ್ಮ ಗಾಂಧಿ ಜನ್ಮ ದಿನದಂದೇ ದೆಹಲಿ ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನ್ನ "ಕ್ರೂರತೆ" ಮೆರೆದಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
"ಅಂತರಾಷ್ಟ್ರೀಯ ಅಹಿಂಸಾ ದಿನದಂದು  ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆಗಾಗಿ ಬಂದಿದ್ದ ರೈತರ ಮೇಲೆ "ಕ್ರೂರತೆ" ಮೆರೆಯುವುದರೊಡನೆ ಬಿಜೆಪಿ ಸರ್ಕಾರವು ಮಹಾತ್ಮ ಗಾಂಧಿ ಅವರ ೧೫೦ನೇ ಜನ್ಮದಿನ ಆಚರಣೆಗೆ ನಾಂದಿ ಹಾಡಿದೆ ಈಗ ರೈತರು ವಾಯುಮಾರ್ಗದ ಮೂಲಕವೂ ದೆಹಲಿ ಪ್ರವೇಶಿಸುವುದಿಲ್ಲ" ರಾಹುಲ್ ಟ್ವಿಟ್ಟರ್ ನಲ್ಲಿ ಬರೆದಿದ್ದಾರೆ.
ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿ, ಸಾಲಮನ್ನಾ ಸೇರಿ ಅನೇಕ ಬೇಡಿಕೆಗಲ ಈಡೇರಿಕೆಗೆ ಆಗ್ರಹಿಸಿ ರಾಜಧಾನಿ ದೆಹಲಿಯತ್ತ ಧಾವಿಸಿದ್ದ  ಕಿಸಾನ್ ಕ್ರಾಂತಿ ಪಾದಯಾತ್ರೆ ಮೇಲೆ ಪೋಲೀಸರು ಜಲಫಿರಂಗು ಹಾಗೂ ಅಶ್ರುವಾಯು ಪ್ರಯೋಗ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.