ಗಾಂಧಿ ಜಯಂತಿ: ಸೇವಾಗ್ರಾಮ ಆಶ್ರಮದ ಪ್ರಾರ್ಥನೆಯಲ್ಲಿ ರಾಹುಲ್, ಸೋನಿಯಾ ಭಾಗಿ
ಗಾಂಧಿ ಜಯಂತಿ ಪ್ರಯುಕ್ತ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ತಮ್ಮ ಕೊನೆಯ ದಿನಗಳನ್ನು ಕಳೆದಿದ್ದ ಮಹಾರಾಷ್ಟ್ರದ...

Published On :
ಸೇವಾಗ್ರಾಮ: ಗಾಂಧಿ ಜಯಂತಿ ಪ್ರಯುಕ್ತ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರು ತಮ್ಮ ಕೊನೆಯ ದಿನಗಳನ್ನು ಕಳೆದಿದ್ದ ಮಹಾರಾಷ್ಟ್ರದ ಸೇವಾಗ್ರಾಮದ ಆಶ್ರಮದಲ್ಲಿ ಮಂಗಳವಾರ ನಡೆದ ಪ್ರಾರ್ಥನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಭಾಗವಹಿಸಿದ್ದರು.
ರಾಹುಲ್ ಗಾಂಧಿ ಅವರು ಸೇವಾಗ್ರಾಮ ಆಶ್ರಮದಲ್ಲಿ 1986ರಲ್ಲಿ ತಮ್ಮ ತಂದೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ನೆಟ್ಟಿದ್ದ ಗಿಡದ ಪಕ್ಕದಲ್ಲೇ ಮತ್ತೊಂದು ಸಸಿ ನೆಡುವ ಮೂಲಕ ಗಾಂಧಿ ಜಯಂತಿಯನ್ನು ಆಚರಿಸಿದರು.
ಈ ವೇಳೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ, ಅಹಮ್ಮದ್ ಪಟೇಲ್ ಅವರು, ನಮ್ಮ ಪಕ್ಷ ಸದ್ಭಾವನಾ ರಾಜಕೀಯ ಮಾಡುತ್ತಿದೆ. ಮಹಾತ್ಮ ಗಾಂಧಿಗೆ ಗೌರವ ಸಲ್ಲಿಸುವುದು ನಮಗೆ ಹೊಸದಲ್ಲ. ಆದರೆ ಬಿಜೆಪಿಯವರಿಗೆ ಈಗ ಮಹಾತ್ಮ ಗಾಂಧಿ ಮತ್ತು ಸರ್ದಾಲ್ ಪಟೇಲ್ ನೆನಪಾಗಿದ್ದಾರೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


