ದೇಶ

ಬಿಜೆಪಿ ತೊರೆದ ಮಹಾ ಶಾಸಕ ಆಶಿಶ್ ದೇಶಮುಖ್, ಕಾಂಗ್ರೆಸ್ ಸೇರುವ ಸಾಧ್ಯತೆ

ಪ್ರತ್ಯೇಕ ವಿದರ್ಭ ರಾಜ್ಯದ ಬಲವಾದ ಪ್ರತಿಪಾದಕರಾಗಿದ್ದ ಬಿಜೆಪಿ ಶಾಸಕ ಆಶಿಶ್ ದೇಶಮುಖ್ ಅವರು ಮಂಗಳವಾರ...

ಬಿಜೆಪಿ ತೊರೆದ ಮಹಾ ಶಾಸಕ ಆಶಿಶ್ ದೇಶಮುಖ್, ಕಾಂಗ್ರೆಸ್ ಸೇರುವ ಸಾಧ್ಯತೆ
ಆಶಿಶ್ ದೇಶಮುಖ್
Published On :
ನಾಗ್ಪುರ: ಪ್ರತ್ಯೇಕ ವಿದರ್ಭ ರಾಜ್ಯದ ಬಲವಾದ ಪ್ರತಿಪಾದಕರಾಗಿದ್ದ ಬಿಜೆಪಿ ಶಾಸಕ ಆಶಿಶ್ ದೇಶಮುಖ್ ಅವರು ಮಂಗಳವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಆಶಿಶ್ ದೇಶಮುಖ್ ಅವರು ಕಾಂಗ್ರೆಸ್ ಸೇರುವ ಸಾಧ್ಯತೆ ಇದ್ದು, ಈ ಸಂಬಂಧ ಇಂದು ವಾರ್ಧಾದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ.
ನಾಗ್ಪುರ ಜಿಲ್ಲೆಯ ಕಟೋಳ್ ಕ್ಷೇತ್ರದ ಶಾಸಕರಾಗಿರುವ ದೇಶಮುಖ್ ಅವರು ನಾಳೆ ವಿಧಾನಸಭೆ ಸ್ಪೀಕರ್ ಹರಿಭಾವು ಬಾಗ್ಡೆ ಅವರನ್ನು ಭೇಟಿ ಮಾಡಿ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಲಿದ್ದಾರೆ.
ಬಿಜೆಪಿ ಸರ್ಕಾರ ರೈತರ ಸಮಸ್ಯೆಗಳನ್ನು ಮತ್ತು ಯುವಕರನ್ನು ಕಡೆಗಣಿಸಿದೆ. ಬಿಜೆಪಿ ದೇಶದಲ್ಲಿ ವಿಭಜನೆ ಮತ್ತು ಮತ ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ದೇಶಮುಖ್ ಆರೋಪಿಸಿದ್ದಾರೆ.
ರಾಜ್ಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ರೈತರ ಮತ್ತು ಯುವಕರ ಸ್ಥಿತಿ ಚಿಂತಾಜನಕವಾಗಿದೆ. ಆದರೆ ಬಿಜೆಪಿ ಮಾತ್ರ ವೋಟ್ ಬ್ಯಾಂಕ್ ರಾಜಕೀಯದಲ್ಲಿ ತೊಡಗಿದೆ ಎಂದು ದೂರಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.