ಮೋದಿ ಸರ್ಕಾರದ ವಿರುದ್ಧ ಹೊಸ ಸ್ವಾತಂತ್ರ್ಯ ಹೋರಾಟಕ್ಕೆ ಕಾಂಗ್ರೆಸ್ ಕರೆ!
ಒಡೆದು ಆಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಸ್ವಾತಂತ್ರ್ಯ ಸಿಗಬೇಕಿದೆ ಎಂದು ಕಾಂಗ್ರೆಸ್ ಹೇಳಿದೆ.

Published On :
ವಾರ್ಧಾ: ಒಡೆದು ಆಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಿಂದ ಸ್ವಾತಂತ್ರ್ಯ ಸಿಗಬೇಕಿದೆ ಎಂದು ಕಾಂಗ್ರೆಸ್ ಹೇಳಿದೆ.
ಮಹಾತ್ಮಾ ಗಾಂಧಿ ಜಯಂತಿ ಅಂಗವಾಗಿ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ(ಸಿಡಬ್ಲ್ಯೂಸಿ) ಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೊಸ ಸ್ವಾತಂತ್ರ್ಯ ಹೋರಾಟಕ್ಕೆ ಕಾಂಗ್ರೆಸ್ ಕಹಳೆ ಮೊಳಗಿಸಿದೆ.
ಬೆದರಿಕೆ, ಒಡೆದು ಆಳುವ ನೀತಿ, ಮತದೃವೀಕರಣ ನೀತಿಗಳನ್ನು ಮೋದಿ ಸರ್ಕಾರ ಅಳವಡಿಸಿಕೊಂಡಿದೆ. ಆರ್ ಎಸ್ಎಸ್ ಹಾಗೂ ಬಿಜೆಪಿ ಮಹಾತ್ಮಾ ಗಾಂಧಿ ಅವರ ಪರಂಪರೆಯ ಮೇಲೆ ಚುನಾವಣೆ ದೃಷ್ಟಿಯಿಂದ ಹಕ್ಕಿ ಪ್ರತಿಪಾದಿಸುವ ಬೂಟಾಟಿಕೆ ಪ್ರದರ್ಶಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮತ್ತೊಂದು ಸ್ವಾತಂತ್ರ್ಯ ಹೋರಾಟಕ್ಕೆ ಸಜ್ಜಾಗಬೇಕಿದೆ ಎಂದು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ತೀರ್ಮಾನಿಸಿದೆ.
ಮೋದಿ ಸರ್ಕಾರದ ವಿರುದ್ಧ ಹೊಸ ಸ್ವಾತಂತ್ರ್ಯ ಹೋರಾಟ ಇಂದಿನ ತುರ್ತು ಅಗತ್ಯ. ಮೋದಿ ಸರ್ಕಾರ ಭಿನ್ನಾಭಿಪ್ರಾಯ ಧ್ವನಿಗಳನ್ನು ಅಡಗಿಸುತ್ತಿದೆ. ಎಲ್ಲಾ ಸಾಂವಿಧಾನಿಕ ಮೌಲ್ಯಗಳು ಅಪಾಯಕ್ಕೆ ಸಿಲುಕಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Congressಕಾಂಗ್ರೆಸ್Modi governmentಮೋದಿ ಸರ್ಕಾರಸ್ವಾತಂತ್ರ್ಯ ಹೋರಾಟFreedom StruggleCWC meetingಸಿಡಬ್ಲ್ಯುಸಿ ಸಭೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


