ತ್ರಿಪುರ ಪಂಚಾಯತ್ ಉಪಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ: ಸಿಪಿಐಎಂ, ಕಾಂಗ್ರೆಸ್ ಗೆ ತೀವ್ರ ಹಿನ್ನಡೆ
ತ್ರಿಪುರಾದ ಪಂಚಾಯತ್ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಜಯಭೇರಿ ಭಾರಿಸಿದೆ.

Published On :
ಅಗರ್ತಲಾ: ತ್ರಿಪುರಾದ ಪಂಚಾಯತ್ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಜಯಭೇರಿ ಭಾರಿಸಿದೆ.
113 ಗ್ರಾಮಪಂಚಾಯತ್ ಸ್ಥಾನಗಳನ್ನು ಗಳಿಸುವ ಮೂಲಕ ಬಿಜೆಪಿ ತ್ರಿಪುರಾದಲ್ಲಿ ಮತ್ತಷ್ಟು ಭದ್ರ ನೆಲೆ ಕಂಡುಕೊಂಡಿದೆ. ಪೀಪಲ್ಸ್ ಫ್ರಂಟ್ ಆಫ್ ತ್ರಿಪುರಾ (ಐಪಿಎಫ್ ಟಿ) ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು. ಪರಿಣಾಮವಾಗಿ ಐಪಿಎಫ್ ಟಿ 9 ಗ್ರಾಮಪಂಚಾಯತಿ ಸ್ಥಾನಗಳನ್ನು ಪಡೆದಿದೆ.
ಇದೇ ವೇಳೆ ಬಿಜೆಪಿ 5 ಪಂಚಾಯತ್ ಸಮಿತಿ ಸ್ಥಾನಗಳನ್ನೂ ಗೆದ್ದಿದ್ದು ಸಿಪಿಐಎಂ ಕೇವಲ 2 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿವೆ, 3,386 ಸ್ಥಾನಗಳಿಗೆ ಉಪಚುನಾವಣೆ ನಡೆದಿದ್ದು 3,207 ಗ್ರಾಮಪಂಚಾಯತ್ ಸ್ಥಾನಗಳು, 161 ಪಂಚಾಯತ್ ಸಮಿತಿ, 18 ಜಿಲ್ಲಾ ಪರಿಷತ್ ಸ್ಥಾನಗಳಿಗೆ ಸೆ.30 ರಂದು ಚುನಾವಣೆ ನಿಗದಿಯಾಗಿತ್ತು. ಆದರೆ ಕೇವಲ 130 ಗ್ರಾಮಪಂಚಾಯಿತಿ, 7 ಪಂಚಾಯತ್ ಸಮಿತಿಗಳನ್ನು ಹೊರತುಪಡಿಸಿ ಶೇ.96 ರಷ್ಟು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


