ಕೋಲ್ಕತಾ ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: 250 ಮಂದಿ ರಕ್ಷಣೆ
ನಗರದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 250ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ...

Published On :
ಕೋಲ್ಕತಾ: ನಗರದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 250ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಅಗ್ನಿ ಅವಘಡ ಸಂಭವಿಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ 10ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ.
ಆಸ್ಪತ್ರೆಯ ಔಷಧಾಲಯ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಸುತ್ತಲೂ ವ್ಯಾಪಿಸಿದೆ ಎಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ 7.30ರ ಸುಮಾರಿಗೆ ಘಟನೆ ನಡೆದಿದ್ದು, ದಟ್ಟ ಹೊಗೆ ಕಂಡು ಬಂದಾಗ ಆಸ್ಪತ್ರೆ ನಿರ್ವಹಣಾ ವಿಭಾಗದ ಸಿಬ್ಬಂದಿಗಳಿಗೆ ತಿಳಿದಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಆಸ್ಪತ್ರೆಯಲ್ಲಿದ್ದ 250ಕ್ಕೂ ಹೆಚ್ಚು ರೋಗಿಗಳನ್ನು ಸ್ಟ್ರೆಚರ್ ಗಳ ಮೂಲಕ ಬೇರೆಡೆಗೆ ಸ್ಥಳಾಂತರಿಸಿದ್ದಾರೆ. ಕೆಲವರು ಕಟ್ಟಡದಿಂದಲೇ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವರದಿಗಳು ತಿಳಿಸಿವೆ.
ಕೋಲ್ಕತಾ ವೈದ್ಯಕೀಯ ಕಾಲೇಜು ಸಂಕೀರ್ಣದಲ್ಲಿ ಹಲವು ಕಟ್ಟಡಗಳಿದ್ದು, ಕೋಲ್ಕತಾ ವೈದ್ಯಕೀಯ ಕಾಲೇಜು ಭಾರತದಲ್ಲಿಯೇ ಅತ್ಯಂತ ಹಳೆಯ ಆಸ್ಪತ್ರೆಯಾಗಿದೆ.
2011 ರ ಡಿಸೆಂಬರ್ ನಲ್ಲಿ ಕೋಲ್ಕತಾದ ಎಎಂಆರ್'ಐ ಆಸ್ಪತ್ರೆಯಲ್ಲಿ ಇದೇ ರೀತಿ ಅಗ್ನಿ ಅವಘಟ ಸಂಭವಿಸಿತ್ತು. ಘಟನೆಯಲ್ಲಿ 92 ಮಂದಿ ಸಾವನ್ನಪ್ಪಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


