ದೇಶ

ನರೇಂದ್ರ ಮೋದಿ ಸರ್ಕಾರದ ಮಹಾತ್ವಕಾಂಕ್ಷಿ ಆಯುಷ್ಮಾನ್ ಭಾರತ್ ಯೋಜನೆಗೆ ಅನುದಾನ ಕೊರತೆ!

ಗಂಭೀರ ಕಾಯಿಲೆಗಳಿಗೆ ತುತ್ತಾಗಿರುವ ಜನರಿಗೆ ಯಾವುದೇ ಆಸ್ಪತ್ರೆಯಲ್ಲಾದರೂ ಉಚಿತ ಚಿಕಿತ್ಸೆ ಸಿಗುವಂತೆ ಜಾರಿಯಾಗಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಗೆ ಆರ್ಥಿಕ ಕೊರತೆ ಎದುರಾಗಿದೆ.

ನರೇಂದ್ರ ಮೋದಿ ಸರ್ಕಾರದ ಮಹಾತ್ವಕಾಂಕ್ಷಿ ಆಯುಷ್ಮಾನ್ ಭಾರತ್ ಯೋಜನೆಗೆ ಅನುದಾನ ಕೊರತೆ!
ನರೇಂದ್ರ ಮೋದಿ
Published On :
ನವದೆಹಲಿ: ಕನಿಷ್ಟ 50 ಕೋಟಿ ಭಾರತೀಯರಿಗೆ ಉಪಯೋಗವಾಗುವ,  ಗಂಭೀರ ಕಾಯಿಲೆಗಳಿಗೆ ತುತ್ತಾಗಿರುವ ಜನರಿಗೆ ಯಾವುದೇ ಆಸ್ಪತ್ರೆಯಲ್ಲಾದರೂ ಉಚಿತ ಚಿಕಿತ್ಸೆ ಸಿಗುವಂತೆ ಜಾರಿಯಾಗಿರುವ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಗೆ ಆರ್ಥಿಕ ಕೊರತೆ ಎದುರಾಗಿದೆ.
ಈಗಾಗಲೇ ನೀಡಲಾಗಿರುವ ಅನುದಾನ ಸಲಾದೇ ಯೋಜನೆಯನ್ನು ನಿರ್ವಹಿಸಲು ಮತ್ತಷ್ಟುಅನುದಾನಕ್ಕೆ ಮನವಿ ಮಾಡಿ ಕೇಂದ್ರ ಹಣಕಾಸು ಇಲಾಖೆಯ ಮೊರೆ ಹೋಗಿದೆ. ಈ ವರ್ಷದ ಬಜೆಟ್ ನಲ್ಲಿ 2,000 ಕೋಟಿ ರೂಪಾಯಿಗಳ ಅನುದಾನವನ್ನು ನೀಡಲಾಗಿತ್ತು. ಆದರೆ ಈ ಮೊತ್ತ ಖರ್ಚಾಗಿದ್ದು 4,500 ಕೋಟಿರೂಪಾಯಿ ಹೆಚ್ಚಿನ ಅನುದಾನಕ್ಕಾಗಿ ರಾಷ್ಟ್ರೀಯ ಆರೋಗ್ಯ ಸಂಸ್ಥೆ ಹಣಕಾಸು ಇಲಾಖೆಗೆ ಮನವಿ ಮಾಡಿದೆ. 
ಎನ್ ಹೆಚ್ಎ ಪ್ರಕಾರ ಪ್ರಾರಂಭಿಕ ಕಾರ್ಯಾಚರಣೆಗೆ, ಈಗಗಾಲೇ ಬಿಡುಗಡೆ ಮಾಡಲಾಗಿರುವ ಅನುದಾನದ ಮೊತ್ತವನ್ನು ಬಳಕೆ ಮಾಡಿಕೊಳ್ಳಲಾಗಿದೆ. ಆದರೆ ಯೋಜನೆಯ ಜಾರಿಗೆ ಹಣದ ಕೊರತೆ ಸಮಸ್ಯೆಯಾಗುವುದಿಲ್ಲವಂತೆ. ಯೋಜನೆ ಯಶಸ್ವಿಯಾಗಿ ಜಾರಿಯಾಗುವುದಕ್ಕೆ ಅಗತ್ಯವಿರುವ ಪರಿಷ್ಕೃತ ಅಂದಾಜು ಪಟ್ಟಿಯನ್ನು ಆರ್ಥಿಕ ಇಲಾಖೆಗೆ ಕಳಿಸಿಕೊಟ್ಟಿದ್ದೇವೆ ಈಗಾಗಲೇ ಕಳಿಸಿಕೊಟ್ಟಿದ್ದೇವೆ ಹಣಕಾಸು ಇಲಾಖೆಯಿಂದ ಅನುಮೋದನೆಯನ್ನು ಎನ್ ಹೆಚ್ ಎ ಎದುರುನೋಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.