ರಾಫೆಲ್ ವಿಷಯ ಬೋಫೋರ್ಸ್ ಗಿಂತಲೂ 20 ಪಟ್ಟು ದೊಡ್ಡದು: ಶಶಿ ತರೂರ್
ಕಾಂಗ್ರೆಸ್ ಸಂಸದ ಶಶಿ ತರೂರ್ ರಾಫೆಲ್ ಒಪ್ಪಂದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ರಾಫೆಲ್ ಒಪ್ಪಂದದ ವಿಷಯ ಬೋಫೋರ್ಸ್ ಹಗರಣಕ್ಕಿಂತ 20 ಪಟ್ಟು ದೊಡ್ಡದು ಎಂದು ಹೇಳಿದ್ದಾರೆ.

Published On :
ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ರಾಫೆಲ್ ಒಪ್ಪಂದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ರಾಫೆಲ್ ಒಪ್ಪಂದದ ವಿಷಯ ಬೋಫೋರ್ಸ್ ಹಗರಣಕ್ಕಿಂತ 20 ಪಟ್ಟು ದೊಡ್ಡದು ಎಂದು ಹೇಳಿದ್ದಾರೆ.
ರಾಫೆಲ್ ವಿಷಯ, ಕಾಂಗ್ರೆಸ್ ಅವಧಿಯಲ್ಲಿ ನಡೆದಿದ್ದ ಬೋಫೋರ್ಸ್ ಹಗರಣಕ್ಕಿಂತ 20 ಪಟ್ಟು ದೊದ್ಡದು ಆದರೆ ಮಾಧ್ಯಮಗಳು ಈ ಹಿಂದಿನ ಹಗರಣಕ್ಕೆ ನೀಡಿದ್ದ ಮಹತ್ವವನ್ನು ರಾಫೆಲ್ ವಿಷಯದಲ್ಲಿ ನೀಡುತ್ತಿಲ್ಲ ಎಂದು ಆರೋಪಿಸಿದ್ದಾರೆ. 1980 ರಲ್ಲಿ ಮಾಧ್ಯಮಗಳು ಬೋಫೋರ್ಸ್ ಹಗರಣಕ್ಕೆ ಸಂಬಂಧಿಸಿದಂತೆ ನಿರಂತರವಾಗಿ ಅಧ್ಯಯನ ನಡೆಸಿ ವರದಿ ಪ್ರಕಟಿಸಿದ್ದವು ಪರಿಣಾಮ 1989 ರಲ್ಲಿ ನಡೆದ ಚುನಾವಣೆಯಲ್ಲಿ ರಾಜೀವ್ ಗಾಂಧಿ ಸೋಲನ್ನು ಎದುರಿಸಿದರು ಎಂದು ಶಶಿ ತರೂರ್ ಹೇಳಿದ್ದಾರೆ.
1980 ರಲ್ಲಿ ಮಾಧ್ಯಮಗಳು ಬೋಫೋರ್ಸ್ ಹಗರಣವನ್ನು ಪ್ರಸ್ತಾಪ ಮಾಡದೇ ಇರುವ ದಿನವೇ ಇರಲಿಲ್ಲ. ಬೋಫೋರ್ಸ್ ವಿಚಾರದಲ್ಲಿ ಏನಾಗಿದೆ ಎಂಬುದನ್ನು ತಿಳಿದುಕೊಳ್ಳುವುದಕ್ಕಾಗಿ ವಿಶ್ವಾದ್ಯಂತ ಮಾಧ್ಯಮಗಳು ತಮ್ಮ ಪ್ರತಿನಿಧಿಗಳನ್ನು ಕಳಿಸಿದ್ದರು, ಈಗ ಅದಕ್ಕೆ 20 ಪಟ್ಟು ದೊಡ್ದದಾದ ರಾಫೆಲ್ ಒಪ್ಪಂದ ಹಗರಣ ನಡೆದಿದೆ, ಬೋಫೋರ್ಸ್ ಗೆ ಇಂದಿನ ಮಾಧ್ಯಮಗಳು ಮಹತ್ವ ನೀಡುತ್ತಿರುವುದನ್ನು ನೋಡಿದ್ದೀರಾ? ಖಂಡಿತವಾಗಿಯೂ ನೀಡುತ್ತಿಲ್ಲ ಎಂದು ಶಶಿ ತರೂರ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


