ದೇಶ

ಲಾಲು ಪ್ರಸಾದ್ ಯಾದವ್, ಆರ್ ಜೆಡಿ ಬಗ್ಗೆ ವರದಿ ಪ್ರಕಟಿಸಿದ್ದ ಪತ್ರಕರ್ತನಿಗೆ ಜೀವ ಬೆದರಿಕೆ!

ಲಾಲು ಪ್ರಸಾದ್ ಯಾದವ್ ಹಾಗೂ ಆರ್ ಜೆಡಿ ಪಕ್ಷದ ಕುರಿತು ವರದಿ ಪ್ರಕಟಿಸಿದ್ದ ಆಂಗ್ಲ ಪತ್ರಿಕೆಯ ಪತ್ರಕರ್ತನಿಗೆ ಜೀವ ಬೆದರಿಕೆ ಬಂದಿದೆ.

ಲಾಲು ಪ್ರಸಾದ್ ಯಾದವ್, ಆರ್ ಜೆಡಿ ಬಗ್ಗೆ ವರದಿ ಪ್ರಕಟಿಸಿದ್ದ ಪತ್ರಕರ್ತನಿಗೆ ಜೀವ ಬೆದರಿಕೆ!
ಲಾಲು ಪ್ರಸಾದ್ ಯಾದವ್
Published On :
ಲಾಲು ಪ್ರಸಾದ್ ಯಾದವ್ ಹಾಗೂ ಆರ್ ಜೆಡಿ ಪಕ್ಷದ ಕುರಿತು ವರದಿ ಪ್ರಕಟಿಸಿದ್ದ ಆಂಗ್ಲ ಪತ್ರಿಕೆಯ ಪತ್ರಕರ್ತನಿಗೆ ಜೀವ ಬೆದರಿಕೆ ಬಂದಿದೆ. 
ಟೆಲಿಗ್ರಾಫ್ ಪತ್ರಿಕೆಯಲ್ಲಿ ಪತ್ರಕರ್ತರಾಗಿರುವ ಅಮಿತ್ ಭೆಲಾರಿ, ಲಾಲು ಪ್ರಸಾದ್ ಯಾದವ್ ಹಾಗೂ ಆರ್ ಜೆಡಿ ಬಗ್ಗೆ ವರದಿ ಪ್ರಕಟಿಸಿದ್ದಕ್ಕಾಗಿ ತಮಗೆ ಜೀವ ಬೆದರಿಕೆ ಬಂದಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅ.04 ರಂದು ಅನಾಮಿಕ ವ್ಯಕ್ತಿಯೊಬ್ಬರು ತಮಗೆ ಕರೆ ಮಾಡಿ ಅಸಭ್ಯ ಭಾಷೆಯಲ್ಲಿ ಮಾತನಾಡುವುದೂ ಅಲ್ಲದೇ ಗುಂಡಿಕ್ಕಿ ಹತ್ಯೆ ಮಾಡುವುದಾಗಿ  ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. 
ಲಾಲು ಪ್ರಸಾದ್ ಯಾದವ್ ಅವರ ಕುಟುಂಬದ ಬಗ್ಗೆ ಕೆಟ್ಟದಾಗಿ ಬರೆದ್ದೀಯ, ನಿಮ್ಮ ಮನೆಗೆ ಬಂದು ನಿನ್ನನ್ನು ಗುಂಡಿಕ್ಕಿ ಹತ್ಯೆ ಮಾಡುತ್ತೇನೆ ಎಂದು ಕರೆ ಮಾಡಿದ ವ್ಯಕ್ತಿ ಹೇಳಿದ್ದಾನೆ. ಇದನ್ನು ಆಡಿಯೋ ದಾಖಲೆಯ ಸಹಿತ ಅಮಿತ್ ಭೆಲಾರಿ ಪೊಲೀಸ್ ಠಾಣೆಗೆ ನೀಡಿದ್ದಾರೆ.  ಕಳೆದ 10 ವರ್ಷಗಳಿಂದ ಅಮಿತ್ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು ಇದೇ ಮೊದಲ ಬಾರಿಗೆ ತಮಗೆ ಈ ರೀತಿ ಬೆದರಿಕೆ ಕರೆ ಬಂದಿರುವುದಾಗಿ ಹೇಳಿದ್ದಾರೆ. 
ಪತ್ರಕರ್ತರು ನೀಡಿರುವ ದೂರನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಪ್ರಾರಂಭಿಸಿದ್ದೇವೆ ಎಂದು ಪಾಟ್ನಾ ಎಸ್ಎಸ್ ಪಿ ಮನು ಮಹಾರಾಜ್ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.