ದೇಶ

ಭಾರತ-ರಷ್ಯಾ ಶೃಂಗಸಭೆ ಇಂದು: ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಿವೆ ಉಭಯ ರಾಷ್ಟ್ರಗಳು

ಭಾರತ-ರಷ್ಯಾ ನಡುವಿನ 19ನೇ ವಾರ್ಷಿಕ ಶೃಂಗಸಭೆ ಶುಕ್ರವಾರ ಆರಂಭಗೊಳ್ಳಲಿದ್ದು, ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ...

ಭಾರತ-ರಷ್ಯಾ ಶೃಂಗಸಭೆ ಇಂದು: ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಿವೆ ಉಭಯ ರಾಷ್ಟ್ರಗಳು
ಶೃಂಗಸಭೆ ಹಿನ್ನಲೆಯಲ್ಲಿ ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ
Published On :
ನವದೆಹಲಿ: ಭಾರತ-ರಷ್ಯಾ ನಡುವಿನ 19ನೇ ವಾರ್ಷಿಕ ಶೃಂಗಸಭೆ ಶುಕ್ರವಾರ ಆರಂಭಗೊಳ್ಳಲಿದ್ದು, ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ. 
ಶೃಂಗಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಗುರುವಾರ ಸಂಜೆ ಭಾರತಕ್ಕೆ ಆಗಮಿಸಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪುಟಿನ್ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. 
ಬಳಿಕ ಪುಟಿನ್ ಅವರನ್ನು ತಮ್ಮ ನಿವಾಸದಲ್ಲಿ ಸ್ವಾಗತಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರಷ್ಯಾ ಅಧ್ಯಕ್ಷರ ಜೊತೆ ಮಾತುಕತೆ ನಡೆದಿರು. 
ಶುಕ್ರವಾರ ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಿವೆ. ಆ ಪೈಕಿ ಎಸ್-400 ಟ್ರಯಂಫ್ ಕ್ಷಿಪಣಿ ನಿರೋಧಕ ವಾಯು ರಕ್ಷಣಾ ವ್ಯವಸ್ಥೆ ಖರೀದಿ, ಕಮೋವ್ ಕಾಪ್ಟರ್ ಉತ್ಪಾದನೆಗೆ ಒಡಂಬಡಿಕೆ, ಪರಮಾಣು ಇಂಧನ ಚಾಲಿತ ಸಬ್ ಮರೀನ್ ಖರೀದಿ, ಭಾರತದ ಗಗನಯಾನಿಗಳನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಕರೆದೊಯ್ಯಲು ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆಗಳಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.