ಮಧ್ಯಪ್ರದೇಶದಲ್ಲಿ ಮಾಯಾವತಿ ನಿರ್ಧಾರದಿಂದ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರದು- ರಾಹುಲ್ ಗಾಂಧಿ
ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳದಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ನಿರ್ಧಾರದಿಂದ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ನವದೆಹಲಿ: ಮಧ್ಯ ಪ್ರದೇಶದಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳದಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ನಿರ್ಧಾರದಿಂದ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದು. 2019ರ ಲೋಕಸಭಾ ಚುನಾವಣೆಯಲ್ಲಿ ಮಹಾಮೈತ್ರಿಗೆ ಸೇರುವಂತೆ ಬಿಎಸ್ಪಿಗೆ ಅವರು ಸಲಹೆ ನೀಡಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ನಿಟ್ಟಿನಲ್ಲಿ ಪ್ರತಿಪಕ್ಷಗಳು ಮಹಾಮೈತ್ರಿ ಒಪ್ಪಂದಕ್ಕೆ ಪ್ರಯತ್ನಿಸುತ್ತಿದ್ದು, ಮುಂಬರುವ ರಾಜಸ್ತಾನ, ಮಧ್ಯ ಪ್ರದೇಶ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಬುಧವಾರ ಪ್ರಕಟಿಸಿದ್ದರು.
ಹಿಂದೂಸ್ತಾನ್ ಟೈಮ್ಸ್ ಲೀಡರ್'ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಮಧ್ಯಪ್ರದೇಶ ಚುನಾವಣೆಯಲ್ಲಿ ಬಿಎಸ್ಪಿ ಮೈತ್ರಿ ಮಾಡಿಕೊಳ್ಳದಿರುವುದರಿಂದ ಕಾಂಗ್ರೆಸ್ ಪಕ್ಷದ ಮೇಲೆ ಹೆಚ್ಚಿನ ಪ್ರಮಾಣದ ಪರಿಣಾಮವೇನೂ ಬೀರುವುದಿಲ್ಲ ಎಂದರು. ಆದಾಗ್ಯೂ, ಮಧ್ಯಪ್ರದೇಶ, ಛತ್ತೀಸ್ ಗಡ , ರಾಜಸ್ತಾನ ಹಾಗೂ ತೆಲಂಗಾಣದಲ್ಲಿ ಪಕ್ಷ ಗೆಲವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಹಾಗೂ ಕೇಂದ್ರ ಮಟ್ಟದಲ್ಲಿ ಮೈತ್ರಿ ಕಷ್ಟಸಾಧ್ಯ,. ಇದು ಮಾಯಾವತಿ ಅವರಿಗೆ ಗೊತ್ತಿದ್ದು, ನಮ್ಮ ನಾಯಕರೊಂದಿಗೆ ಮಾತುಕತೆ ನಡೆಸುವ ಸಂದರ್ಭದಲ್ಲಿಯೇ ಮಾಯಾವತಿ ಸ್ವತಂತ್ರವಾಗಿ ಸ್ಪರ್ಧಿಸಲು ಹೋಗಿದ್ದಾರೆ ಎಂದು ಹೇಳಿದರು.
ಆದಾಗ್ಯೂ, 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಸೇರುವಂತೆ ಬಿಎಸ್ಪಿಗೆ ರಾಹುಲ್ ಗಾಂಧಿ ಸಲಹೆ ನೀಡಿದ್ದು, ಉತ್ತರ ಪ್ರದೇಶದಲ್ಲಿ ಎಲ್ಲಾ ಪ್ರತಿಪಕ್ಷಗಳು ಒಗ್ಗೂಡಲಿದ್ದು, ಬಿಎಸ್ಪಿಯೂ ಮೈತ್ರಿ ಸೇರಬಹುದು ಎಂದರು.
ಮಧ್ಯಪ್ರದೇಶದಲ್ಲಿ ಮೈತ್ರಿಗೆ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಒಪ್ಪಿದ್ದರೂ ಕೆಲ ಹಿರಿಯ ನಾಯಕರು ಒಮ್ಮತದ ಅಭಿಪ್ರಾಯ ಮೂಡಲು ಬಿಡುತ್ತಿಲ್ಲ ಎಂದು ಮಾಯಾವತಿ ಹೇಳಿದ್ದರು. ಬಿಜೆಪಿ ತನ್ನಗೆ ದ್ರೋಹ ಬಗೆದಂತೆ ಕಾಂಗ್ರೆಸ್ ತನ್ನನ್ನು ತೃಪ್ತಿಪಡಿಸಿಲ್ಲ ಎಂದು ಮಾಯಾವತಿ ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


