ಬಿಜೆಪಿ, ಆರ್ ಎಸ್ ಎಸ್ ನಾಯಕರ ಮನೆ ನಾಯಿ ಕೂಡಾ ದೇಶಕ್ಕಾಗಿ ಜೀವ ಕೊಟ್ಟಿಲ್ಲ: ಖರ್ಗೆ ಮತ್ತೆ ಹೇಳಿಕೆ
ದೇಶದ ಸ್ವಾತಂತ್ರ್ಯಕ್ಕಾಗಿ ಆರ್ ಎಸ್ ಎಸ್ ಮತ್ತು ಬಿಜೆಪಿ ನಾಯಕರ ಮನೆಯಲ್ಲಿನ ನಾಯಿಗಳು ಕೂಡಾ ಪ್ರಾಣತ್ಯಾಗ ಮಾಡಿಲ್ಲ ಎಂದು ವರ್ಷದ ಹಿಂದೆ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಎಐಸಿಸಿ ಕಾರ್ಯದರ್ಶಿ ಮಲ್ಲಿಕಾರ್ಜನ ಖರ್ಗೆ ಮತ್ತೆ ಅದೇ ರೀತಿಯ ಮಾತುಗಳನ್ನಾಡಿದ್ದಾರೆ.

ನವ ದೆಹಲಿ: ದೇಶದ ಸ್ವಾತಂತ್ರ್ಯಕ್ಕಾಗಿ ಆರ್ ಎಸ್ ಎಸ್ ಮತ್ತು ಬಿಜೆಪಿ ನಾಯಕರ ಮನೆಯಲ್ಲಿನ ನಾಯಿಗಳು ಕೂಡಾ ಪ್ರಾಣತ್ಯಾಗ ಮಾಡಿಲ್ಲ ಎಂದು ವರ್ಷದ ಹಿಂದೆ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಎಐಸಿಸಿ ಕಾರ್ಯದರ್ಶಿ ಮಲ್ಲಿಕಾರ್ಜನ ಖರ್ಗೆ ಮತ್ತೆ ಅದೇ ರೀತಿಯ ಮಾತುಗಳನ್ನಾಡಿದ್ದಾರೆ.
ಮಹಾರಾಷ್ಟ್ರದ ಜಲ್ಗಾನ್ ಜಿಲ್ಲೆಯ ಫೈಜಾಪುರದಲ್ಲಿಂದು ಕಾಂಗ್ರೆಸ್ ಪಕ್ಷ ಆಯೋಜಿಸಿರುವ ಎರಡನೇ ಹಂತದ ಜನಸಂಘರ್ಷ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದವರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ದೇಶದ ಏಕತೆಗಾಗಿ ಇಂದಿರಾಗಾಂಧಿ ತಮ್ಮ ಜೀವವನ್ನೇ ತ್ಯಾಗ ಮಾಡಿದರು. ರಾಜೀವ್ ಗಾಂಧಿ ದೇಶಕ್ಕಾಗಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ದೇಶದ ಸ್ವಾತಂತ್ರ್ಯಕ್ಕಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕರ ಮನೆಯಲ್ಲಿನ ನಾಯಿಗಳು ಪ್ರಾಣ ಕಳೆದುಕೊಂಡಿದ್ದೇವೆಯಾ ? ಹೇಳಿ ಎಂದು ಪ್ರಶ್ನಿಸಿದರು.
ಸ್ವಾತಂತ್ರ್ಯಕ್ಕಾಗಿ ಬಿಜೆಪಿಯ ಯಾವ ನಾಯಕರು ಜೈಲಿಗೆ ಹೋಗಿದ್ದರು ಎಂಬುದನ್ನು ಹೇಳಿ ಎಂದು ಮಲ್ಲಿಕಾರ್ಜುನ ಖರ್ಗೆ ಕೇಳಿದರು.
ಲೋಕಸಭೆಯಲ್ಲಿ ಕಳೆದ ವರ್ಷ ಫೆಬ್ರವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುವ ಭರದಲ್ಲಿ ಖರ್ಗೆ ಇದೇ ರೀತಿಯ ಹೇಳಿಕೆ ನೀಡಿದ್ದರು. ದೇಶದ ಏಕತೆಗಾಗಿ ಇಂದಿರಾ ಗಾಂಧಿ ಪ್ರಾಣ ತ್ಯಾಗ ಮಾಡಿದ್ದಾರೆ. ಬಿಜೆಪಿಯವರು ಯಾರಾದರೂ ಪ್ರಾಣ ತ್ಯಾಗ ಮಾಡಿದ್ದಾರಾ ? ನಾಯಿ ಕೂಡಾ ಇಲ್ಲ ಎಂದು ಖರ್ಗೆ ಕೆಳಮನೆಯಲ್ಲಿ ನೀಡಿದ ಹೇಳಿಕೆ ಭಾರೀ ಟೀಕೆಗೆ ಗುರಿಯಾಗಿತ್ತು.
ಫೈಜಾಪುರದಲ್ಲಿ 1936ರಲ್ಲಿ ಕಾಂಗ್ರೆಸ್ ಮೊದಲ ಸಮಾವೇಶ ನಡೆದಿತ್ತು. ಮಹಾತ್ಮಗಾಂಧಿ, ಜವಹರ್ ಲಾಲ್ ನೆಹರೂ ಮತ್ತಿತರ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಜನಸಂಘರ್ಷ ಯಾತ್ರೆ ಅಂಗವಾಗಿ ಕಾಂಗ್ರೆಸ್ ನಾಯಕರು ಮೂರು ತಿಂಗಳ ಕಾಲ ಮಹಾರಾಷ್ಟ್ರದ 150 ಆಸೆಂಬ್ಲಿ ಕ್ಷೇತ್ರಗಳಲ್ಲಿ ಪ್ರವಾಸ ನೀಡಲಿದ್ದಾರೆ. ಎರಡನೇ ಹಂತದ ಈ ಯಾತ್ರೆಯಲ್ಲಿ ಅಕ್ಟೋಬರ್ 9 ರವರೆಗೂ ಕಾಂಗ್ರೆಸ್ ನಾಯಕರು ಉತ್ತರ ಮಹಾರಾಷ್ಟ್ರದಾದ್ಯಂತ ಪ್ರಚಾರ ನಡೆಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


