ದೇಶ

ನವದೆಹಲಿ: ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ಪುಟಿನ್ ನಿರ್ಬಂಧಿತ ಸಭೆ

ಭಾರತ-ರಷ್ಯಾ ನಡುವಿನ 19ನೇ ವಾರ್ಷಿಕ ಶೃಂಗಸಭೆ ಶುಕ್ರವಾರದಿಂದ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಭಾರತಕ್ಕೆ ಆಗಮಿಸಿರುವ ರಷ್ಯಾ...

ನವದೆಹಲಿ: ಪ್ರಧಾನಿ ಮೋದಿ, ರಷ್ಯಾ ಅಧ್ಯಕ್ಷ ಪುಟಿನ್ ನಿರ್ಬಂಧಿತ ಸಭೆ
ಭಾರತಕ್ಕೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್ ಅವರೊಂದಿಗೆ ಪ್ರಧಾನಿ ಮೋದಿ
Published On :
ನವದೆಹಲಿ: ಭಾರತ-ರಷ್ಯಾ ನಡುವಿನ 19ನೇ ವಾರ್ಷಿಕ ಶೃಂಗಸಭೆ ಶುಕ್ರವಾರದಿಂದ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜಧಾನಿ ದೆಹಲಿಯಲ್ಲಿ ನಿರ್ಬಂಧಿತ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ. 
ರಾಜಧಾನಿ ದೆಹಲಿಯಲ್ಲಿರುವ ಹೈದರಾಬಾದ್ ಹೌಸ್'ಗೆ ಆಗಮಿಸಿದ ಪುಟಿನ್ ಅವರನ್ನು ಆಲಂಗಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ವಾಗತಿಸಿದರು. ಬಳಿಕ ಉಭಯ ರಾಷ್ಟ್ರಗಳ ನಾಯಕರು ನಿರ್ಬಂಧಿತ ಸಭೆ ನಡೆಸುತ್ತಿದ್ದು, ಮಹತ್ವದ ವಿಚಾರಗಳ ಬಗ್ಗೆ ಮಾತುಕತೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. 
ಶೃಂಗಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ನಿನ್ನೆ ಸಂಜೆಯಷ್ಟೇ ಭಾರತಕ್ಕೆ ಆಗಮಿಸಿದ್ದರು. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪುಟಿನ್ ಅವರು ಪುಟಿನ್ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಬಳಿಕ ಪುಟಿನ್ ಅವರನ್ನು ತಮ್ಮ ನಿವಾಸದಲ್ಲಿ ಸ್ವಾಗತಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರಷ್ಯಾ ಅಧ್ಯಕ್ಷರ ಜೊತೆ ಮಾತುಕತೆ ನಡೆಸಿದರು.
ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಿವೆ. ಆ ಪೈಕಿ ಎಸ್-400 ಟ್ರಯಂಫ್ ಕ್ಷಿಪಣಿ ನಿರೋಧಕ ವಾಯು ರಕ್ಷಣಾ ವ್ಯವಸ್ಥೆ ಖರೀದಿ, ಕಮೋವ್ ಕಾಪ್ಟರ್ ಉತ್ಪಾದನೆಗೆ ಒಡಂಬಡಿಕೆ, ಪರಮಾಣು ಇಂಧನ ಚಾಲಿತ ಸಬ್ ಮರೀನ್ ಖರೀದಿ, ಭಾರತದ ಗಗನಯಾನಿಗಳನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಕರೆದೊಯ್ಯಲು ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.