8 ವರ್ಷಗಳ ಬಳಿಕ ಹೈದರಾಬಾದ್ ವಿದ್ಯಾರ್ಥಿ ಒಕ್ಕೂಟ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಎಬಿವಿಪಿ!
ಹೈದರಾಬಾದ್ ವಿದ್ಯಾರ್ಥಿಗಳ ಒಕ್ಕೂಟ ಚುನಾವಣೆಯಲ್ಲಿ ಭಾರತ ವಿದ್ಯಾರ್ಥಿ ಒಕ್ಕೂಟ(ಎಸ್ಎಫ್ಐ)ವನ್ನು ಸೋಲಿಸುವ ಮೂಲಕ ಎಂಟು ವರ್ಷಗಳ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್...

Published On :
ಹೈದರಾಬಾದ್: ಹೈದರಾಬಾದ್ ವಿದ್ಯಾರ್ಥಿಗಳ ಒಕ್ಕೂಟ ಚುನಾವಣೆಯಲ್ಲಿ ಭಾರತ ವಿದ್ಯಾರ್ಥಿ ಒಕ್ಕೂಟ(ಎಸ್ಎಫ್ಐ)ವನ್ನು ಸೋಲಿಸುವ ಮೂಲಕ ಎಂಟು ವರ್ಷಗಳ ಬಳಿಕ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಗೆಲುವು ಸಾಧಿಸಿದೆ.
2009-10ರಲ್ಲಿ ಕೊನೆಯ ಬಾರಿಗೆ ಎಬಿವಿಪಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು ಬಳಿಕ ಇದೀಗ ಪ್ರಮುಖ ಐದು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಇನ್ನು 2013ರ ಬಳಿಕ ವಿದ್ಯಾರ್ಥಿನಿಯೊಬ್ಬಳು ಅಧ್ಯಕ್ಷೆ ಸ್ಥಾನ ಅಲಂಕರಿಸುತ್ತಿರುವುದು ಇದು ಎರಡನೇ ಬಾರಿಯಾಗಿದೆ.
ಸೈಕಾಲಜಿಯಲ್ಲಿ ಪಿಎಚ್ಡಿ ಮಾಡುತ್ತಿರುವ ಆರ್ತಿ ನಾಗಪಾಲ್ ತನ್ನ ಎದುರಾಳಿ ವಿರುದ್ಧ 334 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕಾಗಿ ಎಸ್ಎಫ್ಐ ವತಿಯಿಂದ ಇರಾಮ್ ನವೀನ್ ಕುಮಾರ್ ಸ್ಪರ್ಧಿಸಿದ್ದರು.
ಎಬಿಪಿವಿ ಪ್ರಮುಖ ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಕ್ರೀಡಾ ಕಾರ್ಯದರ್ಶಿ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ಸ್ಥಾನಗಳಲ್ಲಿ ಅಮಿತ್ ಕುಮಾರ್, ದೀರಜ್ ಸಂಗೋಜಿ, ಪ್ರವೀನ್ ಚೌಹಾನ್, ಅರವಿಂದ್ ಎಸ್ ಕುಮಾರ್ ಮತ್ತು ನಿಖಿಲ್ ರಾಜ್ ಗೆಲುವು ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
hyderabadಹೈದರಾಬಾದ್ABVPಎಬಿವಿಪಿSFIಎಸ್ಎಫ್ಐStudents union electionವಿದ್ಯಾರ್ಥಿ ಒಕ್ಕೂಟ ಚುನಾವಣೆAarti Nagpalಆರ್ತಿ ನಾಗಪಾಲ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


