ರಾಜ್ಯ ವಿಧಾನಸಭೆ, ಲೋಕಸಭೆ ಉಪ ಚುನಾವಣೆ ದಿನಾಂಕ ಪ್ರಕಟ, ನ.3ಕ್ಕೆ ಮತದಾನ
ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 3 ರಂದು ಶಿವಮೊಗ್ಗ, ಬಳ್ಳಾರಿ ಹಾಗೂ ಮಂಡ್ಯದಲ್ಲಿ ಲೋಕಸಭೆ ಹಾಗೂ ರಾಮನಗರ, ಜಮಖಂಡಿ ವಿಧಾನಸಭೆ ಉಪಚುನಾವಣೆ ನಡೆಯಲಿದೆ.

ನವದೆಹಲಿ: ರಾಜ್ಯದ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದೆ. ನವೆಂಬರ್ 3 ರಂದು ಶಿವಮೊಗ್ಗ, ಬಳ್ಳಾರಿ, ಮಂಡ್ಯದ ಲೋಕಸಭೆ ಹಾಗೂ ರಾಮನಗರ, ಜಮಖಂಡಿ ವಿಧಾನಸಭೆ ಉಪಚುನಾವಣೆ ನಡೆಯಲಿದೆ.
ಇಂದು ಮಧ್ಯಾಹ್ನ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಒ. ಪಿ. ರಾಮತ್ ಈ ವಿಷಯ ತಿಳಿಸಿದರು.
ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಬಳ್ಳಾರಿಯಲ್ಲಿ ಶ್ರೀರಾಮುಲು ಹಾಗೂ ಮಂಡ್ಯದಲ್ಲಿ ಸಿ. ಎಸ್. ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.
ರಾಮನಗರ ಹಾಗೂ ಜಮಖಂಡಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ನವೆಂಬರ್ 3 ರಂದೇ ನಡೆಯಲಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಡಿಸೆಂಬರ್ 11 ರಂದು ನಡೆಯಲಿದೆ ಎಂದು ರಾವತ್ ತಿಳಿಸಿದರು.
ಎರಡು ಕ್ಷೇತ್ರಗಳಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಚನ್ನಪಟ್ಟಣ ಉಳಿಸಿಕೊಂಡು ರಾಮನಗರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರಿಂದ ಹಾಗೂ ಜಮಖಂಡಿ ಶಾಸಕ ಸಿದ್ದು ನ್ಯಾಮೇಗೌಡ ಮೇ ತಿಂಗಳಲ್ಲಿ ರಸ್ತೆ ಅಪಘಾತದಲ್ಲಿ ನಿಧನ ಹೊಂದಿದ್ದ ಹಿನ್ನೆಲೆಯಲ್ಲಿ ಅವರಿಂದ ತೆರವಾಗಿರುವ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


