ದೇಶ

ಆಯುಷ್ಮನ್ ಭಾರತ್ ಯೋಜನೆಯಡಿ ಎರಡನೇ ಬಾರಿ ಚಿಕಿತ್ಸೆ ಪಡೆಯಲು ಆಧಾರ್ ಕಡ್ಡಾಯ!

ಆಯುಷ್ಮನ್ ಭಾರತ್- ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ಎರಡನೇ ಬಾರಿಗೆ ಚಿಕಿತ್ಸೆ ಪಡೆಯುವವರಿಗೆ ಆಧಾರ್ ಕಡ್ಡಾಯವಾಗಿರುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಆಯುಷ್ಮನ್ ಭಾರತ್  ಯೋಜನೆಯಡಿ ಎರಡನೇ ಬಾರಿ ಚಿಕಿತ್ಸೆ ಪಡೆಯಲು ಆಧಾರ್ ಕಡ್ಡಾಯ!
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚಿಗೆ ಅನುಷ್ಠಾನಗೊಳಿಸಿದ ಆಯುಷ್ಮನ್ ಭಾರತ್- ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ಮೊದಲ ಬಾರಿಗೆ ಚಿಕಿತ್ಸೆ ಪಡೆಯಲು ಆಧಾರ್ ಕಡ್ಡಾಯವೇನಿಲ್ಲ. ಆದರೆ, ಎರಡನೇ ಬಾರಿಗೆ ಚಿಕಿತ್ಸೆ ಪಡೆಯುವವರಿಗೆ ಆಧಾರ್ ಕಡ್ಡಾಯವಾಗಿರುತ್ತದೆ ಎಂದು ಅಧಿಕಾರಿಗಳು  ಹೇಳಿದ್ದಾರೆ.

ಒಂದು ವೇಳೆ ಆಧಾರ್ ಸಂಖ್ಯೆ ಇಲ್ಲದಿದ್ದರೆ,  ಆಧಾರ್  ನೋಂದಣಿ ಮಾಡಿಸಿರುವ  ಬಗ್ಗೆ ಸಂಬಂಧಿಸಿದ ದಾಖಲೆಗಳನ್ನು ಫಲಾನುಭವಿಗಳು ನೀಡಬೇಕಾಗುತ್ತದೆ ಎಂದು ಯೋಜನೆ ಅನುಷ್ಠಾನದ ಜವಾಬ್ದಾರಿ ಹೊತ್ತಿರುವ   ರಾಷ್ಟ್ರೀಯ ಆರೋಗ್ಯ ಏಜೆನ್ಸಿಯ ಸಿಇಓ ಇಂದೂ ಭೂಷಣ್ ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ ಆಧಾರ್ ಗೆ ಸಾಂವಿಧಾನಿಕ ಸ್ಥಾನಮಾನ ಕಲ್ಪಿಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮೊದಲ ಬಾರಿಗೆ ಚಿಕಿತ್ಸೆ ಪಡೆಯುವವರು ಆಧಾರ್ ಅಥವಾ ಮತದಾರರ  ಗುರುತಿನ ಕಾರ್ಡ್ ಮತ್ತಿತರ ದಾಖಲೆಗಳನ್ನು ನೀಡಬಹುದು. ಆದರೆ, ಎರಡನೇ ಬಾರಿಗೆ ಚಿಕಿತ್ಸೆ ಪಡೆಯುವಂತಹವರು ಕಡ್ಡಾಯವಾಗಿ ಆಧಾರ್ ನೀಡಲೇಬೇಕಾಗುತ್ತದೆ. ಇಲ್ಲದಿದ್ದರೆ ಆಧಾರ್ ನೋಂದಣಿ ಮಾಡಿಸಿರುವ ಸಂಬಂಧ ದಾಖಲೆಗಳನ್ನು  ಪುರಾವೆಯಾಗಿ ನೀಡಬೇಕಾಗುತ್ತದೆ ಎಂದು ಭೂಷಣ್ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.