ದೇಶ

ವಿಧಾನಸಭೆ ಚುನವಾಣೆ ಅಭಿವೃದ್ಧಿ ರಾಜಕರಾಣ-ಓಟ್ ಬ್ಯಾಂಕ್ ರಾಜಕಾರಣದ ನಡುವಿನ ಹೋರಾಟ: ಮೋದಿ

ರಾಜಸ್ಥಾನ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಜ್ಮೀರ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಚುನಾವಣೆ ಅಭಿವೃದ್ಧಿ ರಾಜಕಾರಣ-ಓಟ್ ಬ್ಯಾಂಕ್

ವಿಧಾನಸಭೆ ಚುನವಾಣೆ ಅಭಿವೃದ್ಧಿ ರಾಜಕರಾಣ-ಓಟ್ ಬ್ಯಾಂಕ್ ರಾಜಕಾರಣದ ನಡುವಿನ ಹೋರಾಟ: ಮೋದಿ
ಮೋದಿ
Published On :
ರಾಜಸ್ಥಾನ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಜ್ಮೀರ್ ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಚುನಾವಣೆ ಅಭಿವೃದ್ಧಿ
ರಾಜಕಾರಣ-ಓಟ್ ಬ್ಯಾಂಕ್ ರಾಜಕಾರಣದ ನಡುವಿನ ಹೋರಾಟ ಎಂದು ಹೇಳಿದ್ದಾರೆ.
ರಾಜಸ್ಥಾನ ಸಿಎಂ ವಸುಂಧರಾ ರಾಜೆ ಅವರ ಗೌರವ್ ರಥ ಯಾತ್ರಾ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿರುವ ಮೋದಿ, ಮತಗಳಿಗಾಗಿ ಕ್ಷುಲ್ಲಕ ರಾಜಕಾರಣ ಮಾಡುವವರು ಯಾವುದೇ ರಾಜ್ಯವನ್ನು ಪ್ರವೇಶಿಸುವುದಕ್ಕೆ ಅವಕಾಶ ನೀಡಬಾರದು ಎಂದು ಜನತೆಗೆ ಕರೆ ನೀಡಿದ್ದಾರೆ.
ಓಟ್ ರಾಜಕಾರಣ ಹಾಗೂ ಅಭಿವೃದ್ಧಿ ರಾಜಕಾರಣದ ನಡುವೆ ಜನತೆ ಆಯ್ಕೆ ಮಾಡಿಕೊಳ್ಳಬೇಕು ಎಂದು ಮೋದಿ ಹೇಳಿದ್ದು, ಓಟ್ ಬ್ಯಾಂಕ್ ರಾಜಕಾರಣ ಮಾಡುವವರೇ ಹಿಂದೂ-ಮುಸ್ಲಿಂ ಎನ್ನುವ ತಾರತಮ್ಯ ಸೃಷ್ಟಿಸುವವರಾಗಿದ್ದಾರೆ, ಅಂತಹವರೇ ಸೂಕ್ಷ್ಮ ವಿಚಾರಗಳನ್ನು ಮುಂದಿಟ್ಟುಕೊಂಡು ಲಾಭ ಗಳಿಸಲು ಯತ್ನಿಸುತ್ತಿರುತ್ತಾರೆ. 60 ವರ್ಷಗಳಿಂದ ದೇಶದ ಸಂಪೂರ್ಣ ವ್ಯವಸ್ಥೆಯನ್ನು ಹಾಳು ಮಾಡಲಾಗಿದೆ. ಈಗ ದೇಶ ಅಭಿವೃದ್ಧಿ ಹೊಂದುತ್ತಿದೆ. ಓಟ್ ಬ್ಯಾಂಕ್ ರಾಜಕಾರಣ ಮಾಡುವವರನ್ನು ರಾಜ್ಯದಲ್ಲಿ ಮತ್ತೆ ಬರುವುದಕ್ಕೆ ಬಿಡಬೇಡಿ ಎಂದು ಮೋದಿ ಜನತೆಗೆ ಕರೆ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.