ಮಕ್ಕಳ ಮೇಲಿನ ಲೈಂಗಿಕ ಕಿರುಕುಳ : ದೂರು ನೀಡುವ ಸಹಾಯವಾಣಿ ತಾತ್ಕಾಲಿಕವಾಗಿ ರದ್ದು !
ಮಕ್ಕಳ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ದೂರು ನೀಡಬಹುದಾದ ಉಚಿತ ಸಹಾಯವಾಣಿಯನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ

ನವದೆಹಲಿ: ಮಕ್ಕಳ ಮೇಲಿನ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ದೂರು ನೀಡಬಹುದಾದ ಉಚಿತ ಸಹಾಯವಾಣಿಗೆ ಲೈಂಗಿಕ ಸೇವೆಗೆ ಸಂಬಂಧಿಸಿದ ಕರೆಗಳು ಬರುವುದಲ್ಲದೇ, ಆಶ್ಲೀಲ ವಿಚಾರಕ್ಕೆ ಸಂಬಂಧ ಹುಡುಕಾಟದಲ್ಲಿ ಈ ನಂಬರ್ ಕಂಡುಬಂದಿರುವುದರಿಂದ ಅದನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಉಚಿತ ಸಹಾಯವಾಣಿಯ ಸಂಖ್ಯೆಯನ್ನು ಕಾರ್ಯಾಚರಣೆಯಿಂದ ರದ್ದುಪಡಿಸಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದು, ಪರ್ಯಾಯ ಸಂಖ್ಯೆ ನೀಡಲಾಗುವುದು ಎಂದು ಮಕ್ಕಳ ಹಕ್ಕುಗಳ ಸಂರಕ್ಷಣಾ ಆಯೋಗದ ಅಧಿಕಾರಿಗಳು ಹೇಳಿದ್ದಾರೆ.
ಪ್ರತಿ ದಿನವೂ ಹಸಿ ಸುಳ್ಳು ಕರೆಗಳನ್ನು ಸ್ವೀಕರಿಸಲಾಗುತ್ತಿದೆ .ಹೀಗಾಗಿ ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆನ್ ಲೈನ್ ನಲ್ಲಿ ಆಶ್ಲೀಲ ವಿಷಯಕ್ಕೆ ಸಂಬಂಧಿಸಿದಂತೆ ಹುಡುಕಾಟ ನಡೆಸುತ್ತಿದ್ದಾಗ ಈ ಸಂಖ್ಯೆ ದೊರಕಿದ್ದು, ನಂತರ ಡಯಲ್ ಮಾಡಿದ್ದಾಗಿ ಕರೆದಾರರ ಕರೆದಾರರೊಂದಿಗೆ ಸಂಭಾಷಣೆಗಳನ್ನು ಆಧರಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ಹೇಳಿದ್ದಾರೆ.
ಇಂತಹ ಪ್ರಕರಣಗಳಿಂದಾಗಿ ಚೈಲ್ಡ್ ಲೈನ್ 1098 ರ ಜೊತೆಗೆ ಹೆಚ್ಚುವರಿಯಾಗಿ ಪರ್ಯಾಯ ಸಂಖ್ಯೆಯನ್ನು ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


