ದೆಹಲಿ: ಎಎಪಿ ಸರ್ಕಾರ ಇಂಧನ ದರ ಇಳಿಸುವಂತೆ ಒತ್ತಾಯ: ಕೇಂದ್ರ ಸಚಿವ ಎತ್ತಿನ ಗಾಡಿ ಏರಿ ಪ್ರತಿಭಟನೆ !
ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 81.82 ಹಾಗೂ ಡೀಸೆಲ್ ಬೆಲೆ 73.53 ರೂ ಆಗಿದ್ದು, ಕೇಂದ್ರ ಸಚಿವ ವಿಜಯ್ ಗೋಯಲ್ ನೇತೃತ್ವದಲ್ಲಿ ಇಂದು ಬಿಜೆಪಿ ವತಿಯಿಂದ ಎತ್ತಿನ ಗಾಡಿ ಏರಿ ಪ್ರತಿಭಟನೆ ನಡೆಸಲಾಯಿತು.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 81.82 ಹಾಗೂ ಡೀಸೆಲ್ ಬೆಲೆ 73.53 ರೂ ಆಗಿದ್ದು, ಕೇಂದ್ರ ಸಚಿವ ವಿಜಯ್ ಗೋಯಲ್ ನೇತೃತ್ವದಲ್ಲಿ ಇಂದು ಬಿಜೆಪಿ ವತಿಯಿಂದ ಎತ್ತಿನ ಗಾಡಿ ಏರಿ ಪ್ರತಿಭಟನೆ ನಡೆಸಲಾಯಿತು.
ಕೆಂಪು ಕೋಟೆಯಿಂದ ಚಾಂದಿನಿ ಚೌಕ್ ವರೆಗೂ ಎತ್ತಿನ ಗಾಡಿ ಮೆರವಣಿಯಲ್ಲಿ ಸಾಗಿದ ಬಿಜೆಪಿ ಕಾರ್ಯಕರ್ತರು ದೆಹಲಿ ಸರ್ಕಾರ ಇಂಧನ ಬೆಲೆ ಇಳಿಸುವಂತೆ ಒತ್ತಾಯಿಸಿದರು. ಸಚಿವರ ಬೆಂಬಲಿಗರು ಬಿತ್ತಿಪತ್ರಗಳನ್ನು ಪ್ರದರ್ಶಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರಸರ್ಕಾರ ಪ್ರತಿ ಲೀಟರ್ ತೈಲ ಬೆಲೆಯಲ್ಲಿ 2.50 ಪೈಸೆ ಕಡಿತಗೊಳಿಸಿದ್ದು, ನಂತರ ಎಲ್ಲಾ ರಾಜ್ಯಗಳಲ್ಲಿ ಅಬಕಾರಿ ಸುಂಕವನ್ನು ಲೀಟರಿಗೆ 1.5 ರೂಪಾಯಿ ಕಡಿತಗೊಳಿಸುವ ಘೋಷಣೆ ಮಾಡಿವೆ ಆದರೆ, ದೆಹಲಿ ಸರ್ಕಾರ ಇದನ್ನು ಮಾಡಿಲ್ಲ ಎಂದು ಸಚಿವರು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


