ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ನ.1ರವರೆಗೆ ಚಿದಂಬರಂ, ಪುತ್ರ ಕಾರ್ತಿಗೆ ಬಂಧನವಿಲ್ಲ
ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ.1 ರವರೆಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧನಕ್ಕೊಳಪಡಿಸದಂತೆ ದೆಹಲಿ ನ್ಯಾಯಾಲಯ ಸೋಮವಾರ ಸೂಚನೆ ನೀಡಿದೆ...

Published On :
ನವದೆಹಲಿ: ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ.1 ರವರೆಗೂ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಚಿದಂಬರಂ ಅವರನ್ನು ಬಂಧನಕ್ಕೊಳಪಡಿಸದಂತೆ ದೆಹಲಿ ನ್ಯಾಯಾಲಯ ಸೋಮವಾರ ಸೂಚನೆ ನೀಡಿದೆ.
ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ರಾಷ್ಟ್ರೀಯ ತನಿಖಾ ದಳ (ಸಿಬಿಐ) ಹಾಗೂ ಜಾರಿ ನಿರ್ದೇಶನಾಲಯ (ಇಡಿ) ಮನವಿ ಮಾಡಿಕೊಂಡಿರುವ ಹಿನ್ನಲೆಯಲ್ಲಿ ವಿಶೇಷ ಸಿಬಿಐ ನ್ಯಾಯಾಧೀಶ ಒ.ಪಿ.ಸಾಯಿನಿಯವರು ನ.1ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದ್ದಾರೆ.
ಚಿದಂಬರಂ ಅವರ ಪರ ವಕೀಲರಾದ ಪಿ.ಕೆ.ದುಬೆ ಮತ್ತು ಹರ್ಷದೀಪ್ ಸಿಂಗ್ ಅವರು ಸಲ್ಲಿಕೆ ಮಾಡಿರುವ ಅರ್ಜಿಗಳ ಮೇಲಿನ ವಾದ ಮಂಡನೆಗೆ ಮತ್ತು ವಿಸ್ತೃತ ಉತ್ತರ ಸಲ್ಲಿಕೆಗೆ ಕಾಲಾವಕಾಶ ಬೇಕೆಂದು ಸಿಬಿಐ ಹಾಗೂ ಇಡಿ ಪರವಾಗಿ ಹಾಜರಿದ್ದ ಅಡಿಶ್ನಲ್ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಗೂ ನಿತೀಶಾ ರಾಣ್ ಅವರು ಮನವಿ ಮಾಡಿಕೊಂಡಿದ್ದರು.
ಈ ಹಿನ್ನಲೆಯಲ್ಲಿ ವಿಶೇಷ ನ್ಯಾಯಾಧೀಶ ಸಾಯಿನಿ ಅರ್ಜಿಯನ್ನು ಪರಿಗಣಿಸಿ ವಿಚಾರಣೆಯನ್ನು ನ.1ಕ್ಕೆ ಮುಂದೂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CBIಸಿಬಿಐDelhi Courtದೆಹಲಿ ನ್ಯಾಯಾಲಯChidambaramಚಿದಂಬರಂಕಾರ್ತಿ ಚಿದಂಬರಂAircel-Maxisಏರ್ಸೆಲ್-ಮ್ಯಾಕ್ಸಿಸ್Karti Chidambaram
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


