ಜಮ್ಮು-ಕಾಶ್ಮೀರದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಆರಂಭ: ಹೆಚ್ಚಿದ ಭದ್ರತೆ
ಜಮ್ಮು ಮತ್ತು ಕಾಶ್ಮೀರದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮೊದಹ ಹಂತದ ಚುನಾವಣೆ ಸೋಮವಾರ ಆರಂಭಗೊಂಡಿದ್ದು, ಚುನಾವಣೆ ಹಿನ್ನಲೆಯಲ್ಲಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ...

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಮೊದಹ ಹಂತದ ಚುನಾವಣೆ ಸೋಮವಾರ ಆರಂಭಗೊಂಡಿದ್ದು, ಚುನಾವಣೆ ಹಿನ್ನಲೆಯಲ್ಲಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.
1,.100 ಮುನ್ಸಿಪರ್ ವಾರ್ಡ್ ಗಳ ಪೈಕಿ 422 ವಾರ್ಡ್ ಗಳಿಗೆ ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದ್ದು, ಸಂಜೆ 4 ಗಂಟೆಗೆ ಮುಕ್ತಾಯಗೊಳ್ಳಲಿದೆ.
ಒಮರ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಮೆಹಬೂಬಾ ಮುಫ್ತಿ ನೇತೃತ್ವದ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿ) ಪಕ್ಷಗಳು ಚುನಾವಣೆಯಿಂದ ದೂರ ಉಳಿದಿದ್ದು, ಉಗ್ರರು ಚುನಾವಣೆಯನ್ನು ಬಹಿಷ್ಕರಿಸಿದ್ದಾರೆ. ಚುನಾವಣೆಗೆ ಉಗ್ರರ ಬೆದರಿಕೆ ಇರುವುದರಿಂದ ಮತದಾನದ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯಬಾರದು ಎಂದು ಭದ್ರತೆಯನ್ನು ಮತ್ತಷ್ಟು ಹೆಚ್ಚಿಸಲಾಗಿದೆ.
422 ವಾರ್ಡ್ ಗಳ 1283 ಅಭ್ಯರ್ಥಿಗಳು ಸ್ಪರ್ಧೆ ನಡೆಸಿದ್ದಾರೆ. ನಾಲ್ಕು ಹಂತಗಳಲ್ಲಿ ನಡೆಯಲಿರುವ ಈ ಚುನಾವಣೆಯಲ್ಲಿ ಒಟ್ಟು 2,990 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಈ ವರೆಗೆ 240 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯೂ ಆಗಿದ್ದಾರೆ. ಇವರಲ್ಲಿ ಬಹುತೇಕ ಮಂದಿ ಕಾಶ್ಮೀರ ಕಣಿವೆಗೆ ಸೇರಿದವರಾಗಿದ್ದಾರೆ.
2ನೇ ಹಂತದ ಮತದಾನವು ಅ.10, ಮೂರನೇ ಹಂತದ ಮತದಾನವು ಅ.13 ಹಾಗೂ ಕಡೆಯ ಹಂತದ ಮತದಾನವು ಅ.16 ರಂದು ನಡೆಯಲಿದ್ದು, ಅ.20 ರಂದು ಮತಎಣಿಕೆ ಪ್ರಕ್ರಿಯೆ ನಡೆದು, ಫಲಿತಾಂಶ ಪ್ರಕಟಗೊಳ್ಳಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರjammu-kashmirಮತದಾನ ಆರಂಭmunicipal electionsನಗರ ಸ್ಥಳೀಯ ಸಂಸ್ಥೆ ಚುನಾವಣೆPolling bigins
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


