'ಬ್ರಹ್ಮೋಸ್' ಕ್ಷಿಪಣಿ ಮಾಹಿತಿ ಸೋರಿಕೆ: ಶಂಕಿತ ಪಾಕ್ ಐಎಸ್ಐ ಏಜೆಂಟ್ ಬಂಧನ
ದೇಶದ ಪ್ರತಿಷ್ಠಿತ ಕ್ಶಿಪಣಿಗಳಲ್ಲಿ ಒಂದಾದ "ಬ್ರಹ್ಮೋಸ್ " ಕುರಿತ ತಾಂತ್ರಿಕ ಮಾಹಿತಿಗಳನ್ನು ನೆರೆಯ ವೈರಿ ಪಾಕಿಸ್ತಾನಕ್ಕೆ ಅಕ್ರಮವಾಗಿ ನೀಡುತ್ತಿದ್ದ ಶಂಕಿತ.....

Published On :
ನಾಗ್ಪುರ್: ದೇಶದ ಪ್ರತಿಷ್ಠಿತ ಕ್ಶಿಪಣಿಗಳಲ್ಲಿ ಒಂದಾದ "ಬ್ರಹ್ಮೋಸ್ " ಕುರಿತ ತಾಂತ್ರಿಕ ಮಾಹಿತಿಗಳನ್ನು ನೆರೆಯ ವೈರಿ ಪಾಕಿಸ್ತಾನಕ್ಕೆ ಅಕ್ರಮವಾಗಿ ನೀಡುತ್ತಿದ್ದ ಶಂಕಿತ ಐಎಸ್ಐ ಏಜೆಂಟ್ ಅನ್ನು ಮಹಾರಾಷ್ಟ್ರದ ನಾಗ್ಪುರದಲ್ಲಿ ಬಂಧಿಸಲಾಗಿದೆ.
ಬಂಧಿತನನ್ನು ನಿಶಾಂತ್ ಅಗರ್ವಾಲ್ ಎಂದಯ ಗುರುತಿಸಿದ್ದು ನಾಗ್ಪುರದಲ್ಲಿನ ಬ್ರಹ್ಮೋಸ್ ಏರೋಸ್ಪೇಸ್ ಘಟಕದಲ್ಲಿ ಈತ ಕಳೆದ ನಾಲ್ಕು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.
ವರದಿಗಳ ಪ್ರಕಾರ ಅಗರ್ವಾಲ್ ಪಾಕಿಸ್ತಾನದ ಗೂಢಚಾರ ಸಂಸ್ಥೆಯಾದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ನ ಶಂಕಿತ್ ಸದಸ್ಯನಾಗಿದ್ದಾನೆ.ಈಗ ಆರೋಪಿಯನ್ನು ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶದ ಎಟಿಎಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಿಶ್ವದ ಅತಿ ವೇಗವಾದ ಕ್ರೂಸ್ ಕ್ಷಿಪಣಿ ಬ್ರಹ್ಮೋಸ್ ಕುರಿತ ಸೂಕ್ಷ್ಮ ಮಾಹಿತಿಯನ್ನು ಆರೋಪಿಯು ಪಾಕಿಸ್ತಾನಕ್ಕೆ ಸೋರಿಕೆ ಮಾಡುತ್ತಿದ್ದನೆಂದು ಆಂಗ್ಲ ಮಾದ್ಯಮ ಸಂಸ್ಥೆಯೊಂದು ವರದಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


