ರಾಫೆಲ್ ಡೀಲ್: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಮತ್ತೆ ವಾಗ್ದಾಳಿ
ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್...

Published On :
ಜೈಪುರ: ರಾಫೆಲ್ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಕಾಂಗ್ರೆಸ್ ಮೋದಿ ರೀತಿ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ ಎಂದಿದ್ದಾರೆ.
ರಾಜಸ್ಥಾನ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಿಕಾನೆರ್ ನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ರಾಫೆಲ್ ಹಗರಣದಲ್ಲಿ ಅನಿಲ್ ಅಂಬಾನಿಯ ರಿಲಯನ್ಸ್ ಗ್ರೂಪ್ ಗೆ ಲಾಭ ಮಾಡಿಕೊಡಲಾಗಿದೆ ಎಂದು ಆರೋಪಿಸಿದರು.
ನಿನ್ನೆ ಧೋಲ್‌ಪುರ ಮತ್ತು ಭರತ್ಪುರದ ವಿಧಾನಸಭಾ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನ್ನಾಡುತ್ತಿದ್ದ ರಾಹುಲ್, 2014ರ ಲೋಕಸಭಾ ಚುನಾವಣಾ ಪ್ರಚಾರದಲ್ಲಿ, ಮೋದಿ ತಾವು ಪ್ರಧಾನಿ ಅಲ್ಲ, ಚೌಕಿದಾರ(ಕಾವಲುಗಾರ) ಆಗಲು ಬಯಸುವುದಾಗಿ ಹೇಳಿದ್ದರು. ಆದರೆ ಯಾರ ಚೌಕಿದಾರ ಎಂದು ಹೇಳಿರಲಿಲ್ಲ. ಅವರು ದೇಶದ ಕಾವಲುಗಾರರಲ್ಲ, ಬದಲಾಗಿ ಅನಿಲ್ ಅಂಬಾನಿ ಕಾವಲುಗಾರರು ಎಂಬುದು ಈಗ ಸ್ಪಷ್ಟವಾಗಿದೆ ಎಂದು ಟೀಕಿಸಿದ್ದರು.
ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಜಮೆ ಮಾಡುತ್ತೇನೆ ಮತ್ತು ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುತ್ತೇನೆ ಎಂದು ಮೋದಿ ರೀತಿ ಕಾಂಗ್ರೆಸ್ ಸುಳ್ಳು ಭರವಸೆಗಳನ್ನು ನೀಡುವುದಿಲ್ಲ. ನಮ್ಮ ಪಕ್ಷ ನೀಡಿದ ಭರವಸೆಯನ್ನು ಈಡೇರಿಸುತ್ತದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


