ತಮಿಳುನಾಡು: ಗರ್ಲ್ ಫ್ರೆಂಡ್ ಕೊಂದು, ತಾನು ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ
ತಮಿಳುನಾಡು ವಿಶೇಷ ಪೊಲೀಸ್ ಪಡೆಯ ಪೇದೆಯೊಬ್ಬ ತನ್ನ ಪ್ರೇಯಸಿಯ ಹುಟ್ಟುಹಬ್ಬದಂದೆ ಆಕೆಯನ್ನು......

Published On :
ಚೆನ್ನೈ: ತಮಿಳುನಾಡು ವಿಶೇಷ ಪೊಲೀಸ್ ಪಡೆಯ ಪೇದೆಯೊಬ್ಬ ತನ್ನ ಪ್ರೇಯಸಿಯ ಹುಟ್ಟುಹಬ್ಬದಂದೆ ಆಕೆಯನ್ನು ಗುಂಡಿಕ್ಕು ಕೊಂದು ಬಳಿಕ ತಾನೂ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ವಿಲ್ಲುಪುರಂ ಜಿಲ್ಲೆಯಲ್ಲಿ ನಡೆದಿದೆ.
ವೆಲ್ಲೋರ್ ಬಟಾಲಿಯನ್ ನಲ್ಲಿ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 24 ವರ್ಷದ ಕೆ ಕಾರ್ತಿಕಿಯನ್ ಇಂದು ಬೆಳಗಿನ ಜಾವ ತನ್ನ ಗರ್ಲ್ ಫ್ರೆಂಡ್ 19 ವರ್ಷದ ಎಸ್ ಸರಸ್ವತಿಯ ಹುಟ್ಚು ಹಬ್ಬ ಆಚರಣೆಯ ಬಳಿಕ ಸರ್ವೀಸ್ ರಿವಾಲ್ವಾರ್ ನಿಂದ ಪ್ರೇಯಸಿಯನ್ನು ಶೂಟ್ ಮಾಡಿದ್ದಾನೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಗಳು ತಿಳಿಸಿವೆ.
ಸರಸ್ವತಿ ಚೆನ್ನೈನ ಖಾಸಗಿ ವೈದ್ಯಕೀಯ ಕಾಲೇಜ್ ವಿದ್ಯಾರ್ಥಿನಿಯಾಗಿದ್ದು, ನಾಲ್ಕು ವರ್ಷಗಳ ಹಿಂದೆ ಕಾರ್ತಿಕಿಯನ್ ಆಕೆಯನ್ನು ಫೇಸ್ ಬುಕ್ ಮೂಲಕ ಪರಿಚಯ ಮಾಡಿಕೊಂಡಿದ್ದರು. ಬಳಿಕ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಸರಸ್ವತಿ ಪೋಷಕರು ಮದುವೆಗೆ ಒಪ್ಪಿಗೆ ಸೂಚಿಸಿದ ಬಳಿಕ ಕಾರ್ತಿಕೆಯನ್ ಆಕೆ ಮನೆಗೆ ಭೇಟಿ ನೀಡುತ್ತಿದ್ದರು.
ನಿನ್ನೆ ರಾತ್ರಿ ಸರಸ್ವತಿ ಹುಟ್ಟು ಹಬ್ಬ ಆಚರಿಸಲು ಕಾರ್ತಿಕಿಯನ್ ತನ್ನ ಸ್ನೇಹಿತರೊಂದಿಗೆ ಆಕೆಯ ಮನೆಗೆ ತೆರಳಿದ್ದು, ಈ ವೇಳೆ ಸರಸ್ವತಿ ತನ್ನ ಕ್ಲಾಸೆಮೆಟ್ ಹುಡುಗರೊಂದಿಗೆ ಮಾತನಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಕಾರ್ತಿಕಿಯನ್ ತನ್ನ ರಿವಾಲ್ವಾರ್ ನಿಂದ ಸರಸ್ವತಿ ಮೇಲೆ ಗುಂಡು ಹಾರಿಸಿದ್ದಾನೆ. ಬಳಿಕ ತಾನೂ ಸಹ ಶೂಟ್ ಮಾಡಿಕೊಂಡಿದ್ದಾನೆ.
ಸ್ಥಳಕ್ಕೆ ವಿಲ್ಲುಪುರಂ ಪೊಲೀಸ್ ವರಿಷ್ಠಾಧಿಕಾರಿ ಎಸ್ ಜಯಕುಮಾರ್ ಮತ್ತು ಇತರ ಅಧಿಕಾರಿಗಳು ಭೇಟಿ ನೀಡಿದ್ದು, ಮೃತದೇಹಗಳನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


