'ದಿ ಕ್ವಿಂಟ್' ಸಂಸ್ಥಾಪಕ ರಾಘವ್ ಬಹ್ಲ್ ವಿರುದ್ದ ಐಟಿ ಇಲಾಖೆ ದಾಳಿ
ತೆರಿಗೆ ಪಾವತಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮ ದೊರೆ ರಾಘವ್ ಬಹ್ಲ್ ಅವರ ನಿವಾಸದ ...

ನವದೆಹಲಿ: ತೆರಿಗೆ ಪಾವತಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮ ದೊರೆ ರಾಘವ್ ಬಹ್ಲ್ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಗುರುವಾರ ದಾಳಿ ಮಾಡಿ ಶೋಧ ಕಾರ್ಯ ನಡೆಸಿದೆ.
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತಂಡ ನೊಯ್ಡಾದಲ್ಲಿರುವ ಬಹ್ಲ್ ಅವರ ನಿವಾಸದ ಮೇಲೆ ಇಂದು ಬೆಳಗ್ಗೆ ಹಠಾತ್ ದಾಳಿ ನಡೆಸಿ ತನಿಖೆಗೆ ಸಂಬಂಧಿಸಿದ ದಾಖಲೆ ಮತ್ತು ಸಾಕ್ಷಿಗಳನ್ನು ತಪಾಸಣೆ ಮಾಡಿದೆ,
ಆದಾಯ ತೆರಿಗೆ ಇಲಾಖೆಯು ತೆರಿಗೆ ಪಾವತಿಸದೆ ವಂಚಿಸುವ ಉದ್ಯಮಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾಚರಣೆಗಿಳಿದಿದ್ದು, ಈ ಕಾರ್ಯಾಚರಣೆ ಕೂಡ ಅದರ ಒಂದು ಭಾಗವಾಗಿದೆ.
ಬಹ್ಲ್ ಅವರು ಕ್ವಿಂಟ್ ನ್ಯೂಸ್ ಪೋರ್ಟಲ್ ಮತ್ತು ನೆಟ್ ವರ್ಕ್ 18 ಗ್ರೂಪ್ ನ ಸ್ಥಾಪಕರಾಗಿದ್ದು, ಭಾರತದ ಮಾಧ್ಯಮ ಲೋಕದ ಖ್ಯಾತ ಉದ್ಯಮಿಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


