ಒಡಿಶಾ: ಗೋಪಾಲ್ಪುರದಲ್ಲಿ ತೀವ್ರತರ 'ತಿತ್ಲಿ' ಚಂಡಮಾರುತದಿಂದ ಭೂಕುಸಿತ !
ಒಡಿಶಾದ ಗಂಜಾಂ ಜಿಲ್ಲೆಯ ಗೋಪಾಲ್ಪುರದಲ್ಲಿ ಇಂದು ಮುಂಜಾನೆಯಿಂದ ತೀವ್ರ ತರವಾದ ಗಂಟೆಗೆ 126 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿರುವ ಚಂಡಮಾರುತದಿಂದಾಗಿ ಅನೇಕ ಕಡೆಗಳಲ್ಲಿ ಭೂ ಕುಸಿತ ಉಂಟಾಗಿದೆ.

ಭುವನೇಶ್ವರ್: ಒಡಿಶಾದ ಗಂಜಾಂ ಜಿಲ್ಲೆಯ ಗೋಪಾಲ್ಪುರದಲ್ಲಿ ಇಂದು ಮುಂಜಾನೆಯಿಂದ ತೀವ್ರ ತರವಾದ ಗಂಟೆಗೆ 126 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿರುವ ಚಂಡಮಾರುತದಿಂದಾಗಿ ಅನೇಕ ಕಡೆಗಳಲ್ಲಿ ಭೂ ಕುಸಿತ ಉಂಟಾಗಿದೆ.
ತಿತ್ಲಿ ಚಂಡಮಾರುತ ಇನ್ನೂ ಒಂದು ಅಥವಾ ಎರಡು ಗಂಟೆಗಳಲ್ಲಿ ಸಂಪೂರ್ಣ ಒಡಿಶಾ ಕರಾವಳಿಯನ್ನು ಆವರಿಸಲಿದ್ದು, ಭೂ ಕುಸಿತ ಪ್ರಕ್ರಿಯೆ ಆರಂಭವಾಗಿದೆ ಎಂದು ಭುವನೇಶ್ವರದ ಹವಾಮಾನ ಇಲಾಖೆ ನಿರ್ದೇಶಕ ಹೆಚ್. ಆರ್. ಬಿಸ್ವಾಸ್ ಹೇಳಿದ್ದಾರೆ.
ಚಂಡಮಾರುತದಿಂದ ಹಲವೆಡೆ ಅಪಾರ ಪ್ರಮಾಣದ ಭೂಮಿ ಹಾನಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಮಧ್ಯೆ ಗೋಪಾಲ್ಪುರದಲ್ಲಿ ಗಂಟೆಗೆ 126 ಕಿ. ಮೀ. ಆಂಧ್ರಪ್ರದೇಶದ ಕಾಳಿಂಗಪಟ್ಟಣ್ಣಂನಲ್ಲಿ ಗಂಟೆಗೆ 56 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿರುವ ಬಗ್ಗೆ ವರದಿಯಾಗಿದೆ.
ತಿತ್ಲಿ ಚಂಡಮಾರುತದ ಪರಿಣಾಮ ಗಂಜಾಂ, ಗಜಪತಿ, ಪೂರಿ, ಕುರ್ದಾ, ಜಗತ್ ಸಿಂಗ್ ಪುರ್ ಮೊದಲಾದ ಐದು ಜಿಲ್ಲೆಗಳಲ್ಲಿ ಬೀರುಗಾಳಿ ಸಹಿತ ಮಹಿಳೆಯಾಗುತ್ತಿದ್ದು, ಭೂ ಕುಸಿತ ಪ್ರಕ್ರಿಯೆ ಆರಂಭವಾಗಿದೆ .
ವಿಖಾಖಪಟ್ಟಣಂ,ಗೋಪಾಲ್ಪುರ, ಪ್ಯಾರಾದೀಪ್ ಗಳಲ್ಲಿ ರಾಡರ್ ಗಳ ಮೂಲಕ ಹವಾಮಾನ ವೈಫರೀತ್ಯದ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಬಿಸ್ವಾಸ್ ಹೇಳಿದ್ದಾರೆ. ಮುಂದಿನ ಆರು ಗಂಟೆಗಳ ಅವಧಿಯಲ್ಲಿ ತಿತ್ಲಿ ಚಂಡಮಾರುತ ಗಂಟೆಗೆ 19 ಕಿಲೋ ಮೀಟರ್ ವೇಗದಲ್ಲಿ ಬಂಗಾಳ ಕೊಲ್ಲಿ ಪ್ರವೇಶಿಸುವ ಸಾಧ್ಯತೆ ಇದೆ.
ತೀವ್ರ ತರ ಚಂಡಮಾರುತದಿಂದಾಗಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ ಬಿದಿದ್ದು, ಕೆಲ ಮನೆಗಳಿಗೆ ಹಾನಿಯಾಗಿದೆ. ಗೋಪಾಲ್ಪುರ , ಮೊದಲಾದ ಕಡೆಗಳಲ್ಲಿ ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದೆ.
ಈ ಮಧ್ಯೆ ಒಡಿಶಾ ಸರ್ಕಾರ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾಗಿದೆ. ಐದು ಜಿಲ್ಲೆಗಳಲ್ಲಿ ಭೂ ಕುಸಿತದ ಮುನ್ಸೂಚನೆಯಿಂದಾಗಿ ತಗ್ಗುಪ್ರದೇಶದಲ್ಲಿ ವಾಸಿಸುತ್ತಿದ್ದ ಸುಮಾರು 3 ಲಕ್ಷ ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


