ಶಬರಿಮಲೆ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು: ಮಲೆಯಾಳಂ ನಟ
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು ಎಂದು...

Published On :
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಿಸುವ ಮಹಿಳೆಯರನ್ನು ಅಡ್ಡಡ್ಡ ಸೀಳಬೇಕು ಎಂದು ಮಲಯಾಳಂ ನಟ ಕೊಲ್ಲಂ ತುಳಸಿ ಅವರು ಶುಕ್ರವಾರ ಆಘಾತಕಾರಿ ಹೇಳಿಕೆ ನೀಡಿದ್ದಾರೆ.
ಇಂದು ಕೊಲ್ಲಂ ಜಿಲ್ಲೆಯ ಚವರದಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ನಟ ತುಳಸಿ, ಶಬರಿಮಲೆಗೆ ಹೋಗುವ ಮಹಿಳೆಯರ ದೇಹವನ್ನುಎರಡು ಭಾಗವಾಗಿ ಕತ್ತರಿಸಬೇಕು. ಅದರಲ್ಲಿ ಒಂದು ಭಾಗವನ್ನು ದೆಹಲಿಗೆ ಮತ್ತು ಇನ್ನೊಂದು ಭಾಗವನ್ನು ತಿರುವನಂತಪುರದ ಮುಖ್ಯಮಂತ್ರಿಗಳ ಕಚೇರಿಗೆ ಕಳುಹಿಸಬೇಕು ಎಂದು ವಿವಾದಾತ್ಮ ಹೇಳಿಕೆ ನೀಡಿದ್ದಾರೆ.
ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಮೂಢರು ಎಂದು ತುಳಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿದ ಸುಪ್ರೀಂ ಕೋರ್ಟ್ ತೀರ್ಪು ವಿರೋಧಿಸಿ ಅಯ್ಯಪ್ಪಸ್ವಾಮಿ ಭಕ್ತರ ಗುಂಪೊಂದು ಕೊಲ್ಲಂನಲ್ಲಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿತ್ತು. ಈ ಪ್ರತಿಭಟನಾ ಮೆರವಣಿಗೆಯನ್ನು ಉದ್ದೇಶಿಸಿ ನಟ ತುಳಸಿ ಈ ರೀತಿ ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


