ಬಿಜೆಪಿ-ಶಿವಸೇನೆ ಮೈತ್ರಿ ಲೋಕಸಭೆಗೆ ಮಾತ್ರ ಸೀಮಿತ, ರಾಜ್ಯಕ್ಕೆ ಅಲ್ಲ: ಪವಾರ್
ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಬಿಜೆಪಿ-ಶಿವಸೇನೆ ಮೈತ್ರಿ ಬಗ್ಗೆ ಭವಿಷ್ಯ ನುಡಿದಿದ್ದು, ಲೋಕಸಭೆಗೆ ಮಾತ್ರ ಈ ಮೈತ್ರಿ ಸೀಮಿತವಾಗಲಿದೆ ಎಂದು ಹೇಳಿದ್ದಾರೆ.

Published On :
ಮುಂಬೈ: ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಬಿಜೆಪಿ-ಶಿವಸೇನೆ ಮೈತ್ರಿ ಬಗ್ಗೆ ಭವಿಷ್ಯ ನುಡಿದಿದ್ದು, ಲೋಕಸಭೆಗೆ ಮಾತ್ರ ಈ ಮೈತ್ರಿ ಸೀಮಿತವಾಗಲಿದೆ ಎಂದು ಹೇಳಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಬಗ್ಗೆ ಮಾತನಾಡಿರುವ ಶರದ್ ಪವಾರ್, ಶಿವಸೇನೆ-ಬಿಜೆಪಿ ಮೈತ್ರಿ ಲೋಕಸಭಾ ಚುನಾವಣೆಗೆ ಮಾತ್ರ ಸೀಮಿತವಾಗಿರಲಿದೆ. ಆದರೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿ ಏರ್ಪಡುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ಲೋಕಸಭೆ, ವಿಧಾನಸಭೆ ಚುನಾವಣೆಗಳು ಏಕ ಕಾಲಕ್ಕೆ ನಡೆಯುವುದರ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿರುವ ಶರದ್ ಪವಾರ್, ಈಗ ಪರಿಸ್ಥಿತಿಗಳು ಬದಲಾಗಿದೆ. ಏಕಕಾಲಕ್ಕೆ ಲೋಕಸಭೆ-ವಿಧಾನಸಭೆ ಚುನಾವಣೆಗಳು ನಡೆಯುವುದಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ.
ಕೇಂದ್ರ ಸರ್ಕಾರ ಹಾಗೂ ಮಹಾರಾಷ್ಟ್ರ ರಾಜ್ಯ ಸರ್ಕಾರಗಳಲ್ಲಿ ಶಿವಸೇನೆ ಬಿಜೆಪಿಯೊಂದಿಗೆ ಅಧಿಕಾರ ಹಂಚಿಕೊಂಡಿದ್ದರೂ ಸಹ ಬಿಜೆಪಿ-ಶಿವಸೇನೆ ಮೈತ್ರಿ ಹದಗೆಟ್ಟಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಶಿವಸೇನೆ ಈಗಾಗಲೇ ಸ್ಪಷ್ಟನೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpSharad Pawarಶರದ್ ಪವಾರ್Assembly electionsವಿಧಾನಸಭಾ ಚುನಾವಣೆಲೋಕಸಭಾ ಚುನಾವಣೆallianceSenaLoksabha Pollsಬಿಜೆಪಿ-ಶಿವಸೇನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


