ದೇಶ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿ ಓರ್ವ ಉಗ್ರನನ್ನು ಸದೆಬಡಿದಿದೆ ಎಂದು ಶನಿವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ: ಓರ್ವ ಉಗ್ರನನ್ನು ಸದೆಬಡಿದ ಸೇನೆ, ಮುಂದುವರೆದ ಕಾರ್ಯಾಚರಣೆ
ಸಂಗ್ರಹ ಚಿತ್ರ
Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಭಾರತೀಯ ಸೇನಾಪಡೆ ಎನ್'ಕೌಂಟರ್ ನಡೆಸಿ ಓರ್ವ ಉಗ್ರನನ್ನು ಸದೆಬಡಿದಿದೆ ಎಂದು ಶನಿವಾರ ತಿಳಿದುಬಂದಿದೆ. 
ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಪ್ರಸ್ತುತ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ. 
ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿಯುತ್ತಿದ್ದಂತೆಯೇ ವಿಶೇಷ ಕಾರ್ಯಾಚರಣೆ, ಸಿಆರ್'ಪಿಎಫ್, ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದವು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. 
ಇದರಂತೆ ಕಾರ್ಯಾಚರಣೆ ಎನ್'ಕೌಂಟರ್ ಆಗಿ ಮಾರ್ಪಟ್ಟಿದ್ದು, ಎನ್'ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಪ್ರಸ್ತುತ ಸ್ಥಳದ ಸುತ್ತಲೂ ಸೇನೆ ಸುತ್ತುವರೆದಿದ್ದು, ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.