ಪ್ರತಿಭಟನೆಗಳಿಗೆ ಹೆದರಿಲ್ಲ, ಶಬರಿಮಲೆ ಯಾತ್ರೆಗೆ ಶೀಘ್ರದಲ್ಲೇ ದಿನಾಂಕ ಘೋಷಣೆ: ತೃಪ್ತಿ ದೇಸಾಯಿ
ಅಯ್ಯಪ್ಪ ಭಕ್ತ ಸಮುದಾಯದಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗುತ್ತಿದ್ದರೂ ದೇವಾಲಯಕ್ಕೆ ಭೇಟಿ ನೀಡುವುದಾಗಿ ಭೂ ಮಾತಾ ಬ್ರಿಗೇಡ್ ಸ್ಥಾಪಕಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಹೇಳಿದ್ದಾರೆ.

ಪುಣೆ: 10 ರಿಂದ 50 ವರ್ಷದೊಳಗಿನ ಮಹಿಳೆಯರಿಗೆ ಶಬರಿ ಮಲೆ ಪ್ರವೇಶ ಕಲ್ಪಿಸುವ ಸುಪ್ರೀಂಕೋರ್ಟ್ ತೀರ್ಪಿಗೆ ಅಯ್ಯಪ್ಪ ಭಕ್ತ ಸಮುದಾಯದಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗುತ್ತಿದ್ದರೂ ದೇವಾಲಯಕ್ಕೆ ಭೇಟಿ ನೀಡುವುದಾಗಿ ಭೂ ಮಾತಾ ಬ್ರಿಗೇಡ್ ಸ್ಥಾಪಕಿ ಹಾಗೂ ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ ಹೇಳಿದ್ದಾರೆ.
ಶಬರಿಮಲೆ ಭೇಟಿ ದಿನವನ್ನು ಶೀಘ್ರದಲ್ಲಿಯೇ ಘೋಷಿಸುವುದಾಗಿ ತಿಳಿಸಿರುವ ತೃಪ್ತಿ ದೇಸಾಯಿ, ತನ್ನೊಬ್ಬಳೇ ಯಾತ್ರೆ ಕೈಗೊಳ್ಳುವುದಿಲ್ಲ. ಬದಲಾಗಿ ಮಹಿಳೆಯರ ಗುಂಪಿನೊಂದಿಗೆ ಭೇಟಿ ನೀಡುವುದಾಗಿ ಹೇಳಿದ್ದು, ಸುಪ್ರೀಂಕೋರ್ಟ್ ತೀರ್ಪನ್ನು ಎಲ್ಲರೂ ಹೃದಯಪೂರ್ವಕವಾಗಿ ಸ್ವಾಗತಿಸಬೇಕೆಂದು ಕರ್ನಾಟಕ ಮೂಲದ ಹೋರಾಟಗಾರ್ತಿ ಮನವಿ ಮಾಡಿಕೊಂಡಿದ್ದಾರೆ.
ಪುಣೆ ಮೂಲದ ಭೂ ಮಾತಾ ಬ್ರಿಗೇಡ್ ಸಂಘಟನೆ ಮೂಲಕ ತೃಪ್ತಿ ದೇಸಾಯಿ, ಅಹಮದ್ ನಗರ ಜಿಲ್ಲೆಯ ಶನಿ ಶಿಂಘ್ನಪುರ ದೇವಾಲಯ, ಕೊಲ್ಲಾಪುರ ಜಿಲ್ಲೆಯ ಮಹಾಲಕ್ಷ್ಮೀ ದೇವಾಲಯ ಮತ್ತು ನಾಸಿಕ್ ಜಿಲ್ಲೆಯ ತ್ರಿಯಂಬಕ್ ಶಿವಾ ದೇವಾಲಯ ಮತ್ತಿತರ ಕಡೆಗಳಲ್ಲಿ ಮಹಿಳೆಯರ ವಿರುದ್ಧ ತಾರಾತಮ್ಯ ವಿರುದ್ಧ ಹೋರಾಟ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


